ಶಿವಮೊಗ್ಗ: ಲಾರಿ ಬಸ್ಸಿನ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಿಟ್ಟೂರು ಗುರುಟೆ ಬಳಿ ಅ.17 ರಂದು ಬೆಳಿಗ್ಗೆ ನಡೆದಿದೆ.

ಸಾಗರದಿಂದ ನಿಟ್ಟೂರು ಮಾರ್ಗವಾಗಿ ಕುಂದಾಪುರ ಕಡೆ ಹೋಗುತ್ತಿದ್ದ ಖಾಸಗಿ ಬಸ್ಸು ಮತ್ತು ಎದುರುಗಡೆಯಿಂದ ಬರುತ್ತಿದ್ದ ಲಾರಿ ನಡುವೆ ಈ ಅಪಘಾತ ಸಂಭವಿಸಿದೆ. ಅಪಘಾತ ರಭಸಕ್ಕೆ ಬಸ್ಸಿನಲ್ಲಿ ಇಬ್ಬರು ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದಾರೆ. ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.

ಬಸ್ಸಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.




