Breaking
23 Mar 2026, Mon

ಅ. 20ರವರೆಗೆ ಕರಾವಳಿಯಲ್ಲಿ ಗುಡುಗು ಸಹಿತ ಮಳೆ

ಮಂಗಳೂರು: ಕರಾವಳಿಯಲ್ಲಿ ಅ.20 ರವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅ. 20 ರವರೆಗೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣಕನ್ನಡ, ಉತ್ತರಕನ್ನಡ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಸಮುದ್ರ ತೀರದಲ್ಲಿ 35 ರಿಂದ 45 kmph ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.

ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ವಹಿಸಲು ಸೂಚಿಸಿದ್ದು, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಹಾಗೂ ಅಲ್ಲಲ್ಲಿ ಭಾರೀ ಮಳೆ ಆಗಲಿದೆ.

ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Leave a Reply

Your email address will not be published. Required fields are marked *