ಬಂಟ್ವಾಳ: ತಾಲೂಕಿನ ಮಂಚಿ ಕಟ್ಟೆ ಪ್ರದೇಶದಲ್ಲಿ ಪರಸ್ಪರ ಗಲಾಟೆ ನಡೆಸುತ್ತಿದ್ದ ಯುವಕರ ವಿರುದ್ಧ ದೂರು ದಾಖಲಾಗಿದೆ.

ವಿಜೇತ್, ರಕ್ಷಿತ್ ಕೊಟ್ಟಾರಿ, ಪುಷ್ಪರಾಜ್, ಅಜೇಯ್, ಜಮೀರ್ ಹಾಗೂ ಮಹಮ್ಮದ್ ಮುಸ್ತಫಾ ಸೇರಿದಂತೆ ಕೆಲ ಯುವಕರ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಂಚಿ ಕಟ್ಟೆ ಪ್ರದೇಶದಲ್ಲಿ ಕೆಲವರು ಗಲಾಟೆ ನಡೆಸುತ್ತಿರುವ ಕುರಿತು ಖಚಿತ ಮಾಹಿತಿಯೊಂದು ಪೊಲೀಸರಿಗೆ ಲಭಿಸಿದೆ. ಸ್ಥಳಕ್ಕೆ ತೆರಳಿ ಈ ಕುರಿತು ಪರಿಶೀಲನೆ ನಡೆಸಿದಾಗ ಅವಾಚ್ಯ ಶಬ್ದಗಳಿಂದ ಬೈದಾಡಿಕೊಂಡು, ಸೌಹಾರ್ದತೆಗೆ ಧಕ್ಕೆ ಉಂಟುಮಾಡುವ ರೀತಿಯಲ್ಲಿ ವರ್ತಿಸಿರುವುದು ಕಂಡುಬಂದಿತ್ತು.
ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.



