Breaking
22 Mar 2026, Sun

ನಿಲ್ಲಿಸಿದ್ದ ಲಾರಿಗೆ ಬೈಕ್ ಡಿಕ್ಕಿ, ಸವಾರನಿಗೆ ಗಾಯ, ಪ್ರಕರಣ ದಾಖಲು

ಕಾರ್ಕಳ : ನಿಲ್ಲಿಸಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿ ಸವಾರ ಗಾಯಗೊಂಡಿರುವ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದಲ್ಲಿ ಅ. 16ರಂದು ನಡೆದಿದೆ.

ನಿಟ್ಟೆ ಗ್ರಾಮದ ಲೆಮಿನಾ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದ್ದು ಪಡುಬಿದ್ರೆ ಕಡೆಯಿಂದ ಕಾರ್ಕಳ ಕಡೆಗೆ ಹಾದು ಹೋಗಿರುವ ರಾಜ್ಯ ಹೆದ್ದಾರಿಯಲ್ಲಿ ಯಾವುದೇ ಮುನ್ಸೂಚನಾ ಫಲಕ ಇಲ್ಲದೇ ಸಾರ್ವಜನಿಕ ರಸ್ತೆಯಲ್ಲಿ ನಿರ್ಲಕ್ಷ್ಯತನದಿಂದ ನಿಲ್ಲಿಸಿದ್ದ ಲಾರಿಯ ಹಿಂಬದಿಗೆ ವಿಜಯ ಎಂಬುವವರು ಸವಾರಿ ಮಾಡಿಕೊಂಡು ಬರುತ್ತಿದ್ದ ಬೈಕ್ ಡಿಕ್ಕಿಯಾಗಿದೆ ಎಂದು ತಿಳಿದು ಬಂದಿದೆ.

ಪರಿಣಾಮವಾಗಿ ಸವಾರ ವಿಜಯ ಅವರು ಗಾಯಗೊಂಡಿದ್ದಾರೆ.

ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *