Breaking
25 Sep 2026, Fri

ಆಟವಾಡುವ ವೇಳೆ ಆಯತಪ್ಪಿ ಕೃಷಿ ಹೊಂಡಕ್ಕೆ ಬಿದ್ದು ಮೂವರು ಮಕ್ಕಳ ದುರಂತ ಅಂತ್ಯ

ವಿಜಯಪುರ: ಕೃಷಿ ಹೊಂಡಕ್ಕೆ ಬಿದ್ದು ಮೂವರು ಮಕ್ಕಳು ದಾರುಣವಾಗಿ ಮೃತಪಟ್ಟ ಘಟನೆ ವಿಜಯಪುರ ತಾಲೂಕಿನ ಮಿಂಚನಾಳ ತಾಂಡಾದ ಮಹದೇವ ನಗರದಲ್ಲಿ ನಡೆದಿದೆ.

ಶಿವಮ್ಮ ರಾಜು ರಾಠೋಡ್ (8), ಕಾರ್ತಿಕ ವಿಶ್ವ ರಾಠೋಡ್ (7) ಹಾಗೂ ಸ್ವಪ್ನಾ ರಾಜು ರಾಠೋಡ್ (12) ಮೃತ ದುರ್ದೈವಿಗಳಾಗಿದ್ದಾರೆ.

ಮಹದೇವ ನಗರದ ಬಳಿಯ ರಾಠೋಡ್ ಎಂಬವರ ಜಮೀನಿನಲ್ಲಿ ಮೂವರು ಮಕ್ಕಳು ಕುರಿಗಳ ಜೊತೆಗೆ ಆಟವಾಡುತ್ತಿದ್ದರು.ಕುಟುಂಬದವರು ಸಹ ಮಕ್ಕಳು ಇಲ್ಲಿಯೇ ಆಟವಾಡುತ್ತಿದ್ದಾರಲ್ಲ ಎಂದು ಅಂದುಕೊಂಡಿದ್ದರು.

ಹೀಗೆ ಕುರಿಗಳ ಜೊತೆ ಆಡುತ್ತ ಕೃಷಿ ಹೊಂಡದ ಬಳಿ ತೆರಳಿರುವ ಮಕ್ಕಳು ಆಯತಪ್ಪಿ ಬಿದ್ದಿದ್ದು, ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಬಹಳ ಹೊತ್ತಾದರೂ ಮಕ್ಕಳು ಬಾರದಿರುವ ಹಿನ್ನಲೆ ಕುಟುಂಬಸ್ಥರು ಹುಡುಕಾಟ ನಡೆಸಿದ್ದು, ಸಂಶಯ ಬಂದು ಕೃಷಿ ಹೊಂಡದಲ್ಲಿ ಹುಡುಕಾಡಿದಾಗ ಮೂವರು ಮಕ್ಕಳ ಶವ ಪತ್ತೆಯಾಗಿದೆ.

ಮಕ್ಕಳನ್ನು ಕಳೆದುಕೊಂಡ ಪೋಷಕ ಆಕ್ರಂದನ ಮುಗಿಲು ಮುಟ್ಟಿದೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *