Breaking
22 Mar 2026, Sun

ಬಿಜೆಪಿ ಶಾಸಕ ಶಿವಾಜಿ ಕಾರ್ಡಿಲೆ ಗೆ ಹೃದಯಾಘಾತ

ಪುಣೆ: ಮಹಾರಾಷ್ಟ್ರದ ಅಹಿಲ್ಯಾನಗರ ಜಿಲ್ಲೆಯ ರಾಹುರಿ ಕ್ಷೇತ್ರದ ಬಿಜೆಪಿ ಶಾಸಕ ಶಿವಾಜಿ ಕಾರ್ಡಿಲೆ (66) ಅವರು ಅ.17 ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಶಿವಾಜಿ ಅವರಿಗೆ ಮುಂಜಾನೆ ವೇಳೆ ಹೃದಯಾಘಾತ ಸಂಭವಿಸಿದ್ದು ತಕ್ಷಣ ಅವರನ್ನು ಅಹಿಲ್ಯಾನಗರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅದಾಗಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ಬೆನ್ನುಹುರಿ ಸಮಸ್ಯೆಯಿಂದ ಬಳಲುತ್ತಿದ್ದ ಶಿವಾಜಿ ಅವರು ಕಳೆದ ಕೆಲ ಸಮಯಗಳಿಂದ ಸಾರ್ವಜನಿಕ ಜೀವನದಿಂದ ದೂರವೇ ಉಳಿದಿದ್ದರು. ಆರು ಬಾರಿ ಶಾಸಕರಾಗಿದ್ದು ಐದು ಬಾರಿ ಸತತ ಗೆಲುವು ದಾಖಲಿಸಿದ್ದಾರೆ. 2019ರಲ್ಲಿ ಎನ್‌ಸಿಪಿ ಅಭ್ಯರ್ಥಿ ಎದುರು ಪರಾಭವಗೊಂಡಿದ್ದರು. 2024ರಲ್ಲಿ ಮತ್ತೆ ಶಾಸಕರಾಗಿ ಆಯ್ಕೆಯಾದರು.

ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ವಿಧಾನಸೌಧ ಪ್ರವೇಶಿಸಿದ ಶಿವಾಜಿಯವರು ನಂತರ ಕಾಂಗ್ರೆಸ್‌ನಿಂದ ಹಾಗೂ ಅವಿಭಜಿತ ಎನ್‌ಸಿಪಿಯಿಂದಲೂ ಸ್ಪರ್ಧಿಸಿ ಶಾಸಕರಾಗಿದ್ದರು.

ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನ ಅಗಲಿದ್ದಾರೆ.

Leave a Reply

Your email address will not be published. Required fields are marked *