Breaking
23 Mar 2026, Mon

ಪುತ್ತೂರಿನ ದರ್ಬೆಯಲ್ಲಿ ಆಟೋ ರಿಕ್ಷಾ ಚಾಲಕರೊಬ್ಬರ ಮೇಲೆ ಸಂಚಾರಿ ಪೊಲೀಸರ ಹಲ್ಲೆ, ವಿಡಿಯೋ ವೈರಲ್

ಪುತ್ತೂರು: ಆಟೋ ರಿಕ್ಷಾ ಚಾಲಕರೊಬ್ಬರ ಮೇಲೆ ಸಂಚಾರಿ ಪೊಲೀಸರು ಹಲ್ಲೆ ನಡೆಸಿರುವ ಘಟನೆ ಪುತ್ತೂರಿನ ದರ್ಬೆ ಸಮೀಪ ನಡೆದಿದ್ದು ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ದರ್ಬೆಯಿಂದ ಮಾಣಿ-ಮೈಸೂರು ಹೆದ್ದಾರಿಗೆ ಸಂಪರ್ಕಿಸುವ ಮುಖ್ಯ ರಸ್ತೆಯಲ್ಲಿ ಸಂಚಾರಿ ಪೊಲೀಸರು ರಿಕ್ಷಾ ಚಾಲಕಿನಿಗೆ ಹಲ್ಲೆ ನಡೆಸಿದ್ದಾರೆ.

ಈ ಕುರಿತು ವಿಡಿಯೋವೊಂದು ವೈರಲ್ ಆಗಿದ್ದು ಆ ವಿಡಿಯೋದಲ್ಲಿ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಸಂಚಾರಿ ಠಾಣೆಯ ಪೊಲೀಸರು ಆಟೋ ರಿಕ್ಷಾಕ್ಕೆ ಅಡ್ಡಲಾಗಿ ಬಂದು ಚಾಲಕನ ಮೇಲೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾರೆ.

ಆದ್ರೆ ಪೊಲೀಸರು ಆಟೋ ಚಾಲಕನ ವಿರುದ್ಧ ಯಾಕೇ ಆ ರೀತಿ ವರ್ತಿಸಿದ್ದರು ಎನ್ನುವುದು ಸ್ಪಷ್ಟವಾಗಿಲ್ಲ. ಸಾರ್ವಜನಿಕ ವಲಯದಲ್ಲಿ ಈ ಘಟನೆ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ತಪ್ಪಿತಸ್ಥ ಪೊಲೀಸರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ ಕೇಳಿಬಂದಿದೆ.

ವೀಡಿಯೊದಲ್ಲಿ ಇಬ್ಬರು ಪೊಲೀಸರ ತಪ್ಪು ಸ್ಪಷ್ಟವಾಗಿ ತೋರುತ್ತಿದ್ದು, ಘಟನೆಯ ಕಾರಣವನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Leave a Reply

Your email address will not be published. Required fields are marked *