Breaking
20 Sep 2026, Sun

ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ

ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಕಾವೂರು ಠಾಣೆ ಪೊಲೀಸರು ಬಂಧಿಸಿದ್ದು, ನ್ಯಾಯಾಧೀಶರು ಅ.29ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಕಾವೂರು ಜ್ಯೋತಿ ನಗರ ನಿವಾಸಿ ಧರ್ಮರಾಜ (60) ಎಂದು ಗುರುತಿಸಲಾಗಿದೆ.

ಕಳೆದ ಏಳು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಈತ 2018ರಲ್ಲಿ ಕಾವೂರು ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಆರೋಪಿಯಾಗಿದ್ದನು. ಈತನ ವಿರುದ್ಧ ಎಲ್ ಪಿಸಿ ವಾರಂಟ್ ಹೊರಡಿಸಿತ್ತು.

ಖಚಿತ ಮಾಹಿತಿ ಮೇರೆಗೆ ಕಾವೂರು ಠಾಣೆಯ ಎಎಸ್ಐ ಚಂದ್ರಹಾಸ್ ಸನಿಲ್ ಮತ್ತು ಎಚ್ ಸಿ ಬಾಲಕೃಷ್ಣ ಮತ್ತು ಪಿಸಿ ಚಂದ್ರಶೇಖರಪ್ಪ ಅವರು ಆರೋಪಿಯನ್ನು ಮೂಲ್ಕಿ ಪಕ್ಷಿಕೆರೆ ಕೆಮ್ರಾಲ್ ಬಳಿ ಬಂಧಿಸಿದ್ದಾರೆ.

Leave a Reply

Your email address will not be published. Required fields are marked *