ಬಂಟ್ವಾಳ: ದ.ಕ-ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಚುನಾವಣೆಯು ಇಂದು ನಡೆಯುತ್ತಿದ್ದು, ಬೆಳ್ಳಗಿನಿಂದಲೇ ಮತದಾನ ಪ್ರಕ್ರಿಯೆ ಪ್ರಾರಂಭಗೊಂಡಿದ್ದು ಸ್ಥಳೀಯ ಸಂಸ್ಥೆಗಳ ಜನ ಪ್ರತಿನಿಧಿಗಳು ಉತ್ಸಹ ದಿಂದಲೇ ಮತಗಟ್ಟೆಗೆ ಆಗಮಿಸಿ ತಮ್ಮ ಅಭ್ಯರ್ಥಿಗಳಿಗೆ ಮತ ಚಲಾಯೀ ಸುತ್ತಿದ್ದಾರೆ.


ಅದರಂತೆ ಕುಕ್ಕಿಪಾಡಿ ಗ್ರಾಮ ಪಂಚಾಯತ್ ನ ಬಿಜೆಪಿ ಬೆಂಬಳಿತ ಎಲ್ಲಾ 11 ಸದಸ್ಯರು ವಿಧಾನ ಪರಿಷತ್ ಚುನಾವಣೆಯಲ್ಲಿ ಭಾಗವಹಿಸಿ ಮತದಾನ ಮಾಡಿದರು.ಬಂಟ್ವಾಳ ಮಂಡಲದ ಚುನಾವಣೆ ಸಂಚಾಲಕ ಪ್ರಭಾಕರ ಪ್ರಭು, ಗ್ರಾಮ ಪಂಚಾಯತ್ ಅಧ್ಯಕ್ಷ ಹಾಗೂ ಸಹ ಸಂಚಾಲಕ ಶೇಖರ್ ಶೆಟ್ಟಿ ಹಾಗೂ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

