Breaking
28 Jun 2026, Sun

ಮಣಿಪಾಲದ ಬಾಡಿಗೆ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆ

ಮಣಿಪಾಲ: ಬಾಡಿಗೆ ಮನೆಯಲ್ಲಿ ಕೊಳತೆ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾದ ಘಟನೆ ಮಣಿಪಾಲದ ರಾಹುಲ್ ನಗರದಲ್ಲಿ ನಡೆದಿದೆ.

ಮೃತರನ್ನು ಆರ್. ಸೆಲ್ವರಾಜ್ ಎಂದು ಗುರುತಿಸಲಾಗಿದೆ.

ಇವರು ಹಣಕಾಸು ವ್ಯವಹಾರ ನಡೆಸುತ್ತಿದ್ದು ರಾಹುಲ್ ನಗರದಲ್ಲಿ ಬಾಡಿಗೆ ಮನೆಯಲ್ಲಿ ಒಂಟಿಯಾಗಿ ವಾಸವಾಗಿದ್ದು ಬೆಡ್ ನಲ್ಲಿ ಮಲಗಿದ ಸ್ಥಿತಿಯಲ್ಲೇ ಮೃತಪಟ್ಟಿದ್ದಾರೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.

ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಕೊಳೆತ ಕಳೇಬರವನ್ನು ಪ್ಲಾಸ್ಟಿಕ್ ಹೊದಿಕೆಯಲ್ಲಿ ಭದ್ರಗೊಳಿಸಿ, ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ವ್ಯವಸ್ಥೆಗೊಳಿಸುವ ಮೂಲಕ ಠಾಣೆಗೆ ಸಹಕರಿಸಿದರು.

ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *