Breaking
23 Mar 2026, Mon

ಅಭಿಷೇಕ್ ಆತ್ಮಹತ್ಯೆಗೆ ಪ್ರಚೋದನೆ ನೀಡಿದವರನ್ನು ಬಂಧಿಸಿ: ವಿಶ್ವಕರ್ಮ ಯುವ ಮಿಲನ ಸ್ಥಾಪಕ ಅಧ್ಯಕ್ಷ ವಿಕ್ರಂ ಐ ಆಚಾರ್ಯ

ಉಡುಪಿ: ಮಂಗಳೂರಿನ ನಾಲ್ಕು ಮಂದಿಯ ತಂಡ ಹನಿಟ್ರ್ಯಾಪ್ ಬಲೆಗೆ ಬೀಳಿಸಿ, ಹಣ ನೀಡುವಂತೆ ಚಿತ್ರಹಿಂಸೆ ಕೊಟ್ಟಿದ್ದ ಪರಿಣಾಮ ಅಭಿಷೇಕ್ ಆಚಾರ್ಯ ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್ ನೋಟ್ ಆಧಾರದಲ್ಲಿ ತಪ್ಪಿತಸ್ಥರನ್ನು ಪೊಲೀಸರು ಬಂಧಿಸಿ ಕಾನೂನುಕ್ರಮ ಕೈಗೊಳ್ಳಬೇಕು ಎಂದು ವಿಶ್ವಕರ್ಮ ಯುವ ಮಿಲನ ಸ್ಥಾಪಕ ಅಧ್ಯಕ್ಷ ವಿಕ್ರಂ ಐ ಆಚಾರ್ಯ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದ್ದಾರೆ.

ಅಭಿಷೇಕ್ ಆಚಾರ್ಯ ಇವರಿಂದ ನಿರೀಕ್ಷಾ, ರಾಕೇಶ್, ರಾಹುಲ್ ಹಾಗೂ ತಸ್ಲಿಂ ಮೂರ್ನಾಲ್ಕು ಲಕ್ಷ ರೂ. ಗಳನ್ನು ಬಲವಂತವಾಗಿ ಕಿತ್ತುಕೊಂಡಿದ್ದರು. ಅಲ್ಲದೆ ಕೊಲೆ ಬೆದರಿಕೆ ಕೂಡ ಹಾಕಿದ್ದಾರೆ.

ಈ ಚಿತ್ರಹಿಂಸೆ ತಾಳಲಾರದೆ ಅಭಿಷೇಕ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆರೋಪಿಗಳ ಮೇಲೆ ಪ್ರಕರಣ ಕೂಡ ದಾಖಲಾಗಿದೆ. ಆದರೆ ಪೊಲೀಸರು ಯಾವುದೇ ಕಠಿಣ ಕ್ರಮಕೈಗೊಂಡಿಲ್ಲ.

ಈ ನಾಲ್ಕು ಮಂದಿ ಅಭಿಷೇಕ್ ನ ಅಶ್ಲೀಲ ಚಿತ್ರಗಳನ್ನು ಹಿಡನ್ ಕ್ಯಾಮರಾದಲ್ಲಿ ಸೆರೆ ಹಿಡಿದು, ಹಣಕ್ಕಾಗಿ ಬೆದರಿಕೆಯೊಡ್ಡಿದ್ದಾರೆ. ಹೀಗಾಗಿ ಪೊಲೀಸರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಅರೋಪಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ಕೆ.ಎ. ನವೀನ್ ಆಚಾರ್ಯ, ಸುಬ್ರಹ್ಮಣ್ಯ ಆಚಾರ್ಯ, ಸಂಕೇಶ್ ಆಚಾರ್ಯ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *