Breaking
23 Mar 2026, Mon

ವಿದ್ಯಾರ್ಥಿನಿಯ ಕತ್ತು ಕೊಯ್ದು ಹತ್ಯೆ ಪ್ರಕರಣ; ಆರೋಪಿಗಳು ಪೊಲೀಸ್‌ ವಶಕ್ಕೆ

ಬೆಂಗಳೂರು: ಪ್ರೀತಿಸಲು ನಿರಾಕರಿಸಿದ ಕಾರಣಕ್ಕೆ ವಿದ್ಯಾರ್ಥಿನಿಯ ಮುಖಕ್ಕೆ ಖಾರದ ಪುಡಿ ಎರಚಿ ಚಾಕುವಿನಿಂದ ಕತ್ತು ಕೊಯ್ದು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಕೃತ್ಯ ಎಸಗಿದ್ದ ವಿಘ್ನೇಶ್(28) ಹಾಗೂ ಆತನಿಗೆ ನೆರವಾಗಿದ್ದ ಹರೀಶ್(36) ಎಂಬವನನ್ನು ಪೊಲೀಸರು ಬಂಧಿಸಿದ್ದಾರೆ.

ಶ್ರೀರಾಂಪುರ ಬಳಿಯ ಸ್ವತಂತ್ರಪಾಳ್ಯದ ವಿಘ್ನೇಶ್, ತನಗೆ ಪರಿಚಿತಳಾಗಿದ್ದ ಯಾಮಿನಿ ಪ್ರಿಯಾಳನ್ನು ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ. ಆದರೆ, ಪ್ರಿಯಾ ಆತನನ್ನು ನಿರಾಕರಿಸಿದ್ದಳು. ಗುರುವಾರ ಸಂಜೆ ಕಾಲೇಜು ಮುಗಿಸಿಕೊಂಡು ಮನೆಗೆ ಬರುತ್ತಿದ್ದ ವೇಳೆ ಅಡ್ಡಗಟ್ಟಿ, ಮುಖಕ್ಕೆ ಖಾರದ ಪುಡಿ ಎರಚಿ, ಕೊಲೆ ಮಾಡಿ ಪರಾರಿಯಾಗಿದ್ದ.

ಆರೋಪಿಗಳ ಬಂಧನಕ್ಕೆ ಶ್ರೀರಾಂಪುರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ನೇತೃತ್ವದಲ್ಲಿ ಎರಡು ವಿಶೇಷ ತಂಡಗಳನ್ನು ರಚಿಸಲಾಗಿದ್ದು, ಸದ್ಯ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Leave a Reply

Your email address will not be published. Required fields are marked *