ವಿಧಾನ ಪರಿಷತ್ ಚುನಾವಣೆಯಲ್ಲಿ ಭಾಗವಹಿಸಿದ ರಾಯಿ ಪಂಚಾಯತ್ ಸದಸ್ಯರು

ಬಂಟ್ವಾಳ: ದ.ಕ-ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಚುನಾವಣೆಯು ಇಂದು ನಡೆಯುತ್ತಿದ್ದು, ಬೆಳ್ಳಗಿನಿಂದಲೇ ಮತದಾನ ಪ್ರಕ್ರಿಯೆ ಪ್ರಾರಂಭಗೊಂಡಿದ್ದು ಸ್ಥಳೀಯ ಸಂಸ್ಥೆಗಳ ಜನ ಪ್ರತಿನಿಧಿಗಳು ಉತ್ಸಹ ದಿಂದಲೇ ಮತಗಟ್ಟೆಗೆ ಆಗಮಿಸಿ ತಮ್ಮ ಅಭ್ಯರ್ಥಿಗಳಿಗೆ ಮತ ಚಲಾಸುತ್ತಿದ್ದಾರೆ.

ರಾಯಿ ಗ್ರಾಮ ಪಂಚಾಯತ್ ನ ಎಲ್ಲಾ 11 ಸದಸ್ಯರು ಸ್ಥಳೀಯ ಸಂಸ್ಥೆ ಪ್ರತಿನಿಧಿಗಳ ವಿಧಾನ ಪರಿಷತ್ ಚುನಾವಣೆಯಲ್ಲಿ ಭಾಗವಹಿಸಿ ತಮ್ಮ ಮತ ಚಲಾಯಿಸುವ ಮೂಲಕ ಮತದಾನ ಮಾಡಿದರು.

ಈ ಸಂಧರ್ಭದಲ್ಲಿ ರಾಯಿ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *