Breaking
20 Sep 2026, Sun

ಬೈಂದೂರಿನಲ್ಲಿ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪಿಕಪ್, ರಿಕ್ಷಾ ಚಾಲಕ ಸ್ಥಳದಲ್ಲೆ ಸಾವು

ಬೈಂದೂರು: ಪಿಕಪ್ ವಾಹನವೊಂದು ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಚಾಲಕ ಸ್ಥಳದಲ್ಲೆ ಮೃತಪಟ್ಟ ಘಟನೆ ಬೈಂದೂರು ತಾಲೂಕಿನ ಶಿರೂರು ಕೆಳಪೇಟೆಯಲ್ಲಿ ಅ.18 ರಂದು ನಡೆದಿದೆ.

ಶಿರೂರು ಗ್ರಾಮದ ಹಡವಿನಕೋಣೆ ನ್ಯೂ ಕಾಲೋನಿ ನಿವಾಸಿ ಕರಾ ಇಲಿಯಾಸ್(49) ಮೃತಪಟ್ಟ ಚಾಲಕ.

ಕರಾ ಇಲಿಯಾಸ್ ಅವರು ಉಡುಪಿಯ ಮಲ್ಪೆಯಿಂದ ಭಟ್ಕಳ ಕಡೆಗೆ ಸಾಗುತ್ತಿದ್ದ ಮೀನಿನ ವಾಹನ ಶಿರೂರು ಮಾರ್ಕೆಟ್ ಕಡೆಗೆ ಸಾಗುತ್ತಿದ್ದ ಆಟೋ ರಿಕ್ಷಾಕ್ಕೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಗಂಭೀರವಾಗಿ ಗಾಯಗೊಂಡ ರಿಕ್ಷಾ ಚಾಲಕ ಸ್ಥಳದಲ್ಲೆ ಕೊನೆಯುಸಿರೆಳೆದಿದ್ದಾರೆ.

ಬೈಂದೂರು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *