Breaking
23 Mar 2026, Mon

ಲಾಡ್ಜ್ ನಲ್ಲಿ ಶವವಾಗಿ ಪತ್ತೆಯಾದ ಪುತ್ತೂರಿನ ಯುವಕ

ಬೆಂಗಳೂರು: ನಗರದ ಲಾಡ್ಜ್ವೊಂದರಲ್ಲಿ ಪುತ್ತೂರು ಮೂಲದ ಯುವಕ ಶವವಾಗಿ ಪತ್ತೆಯಾದ ಘಟನೆ ಅ.17 ರಂದು ನಡೆದಿದೆ.

ತಕ್ಷಿತ್ ( 20) ಮೃತಪಟ್ಟ ಯುವಕನಾಗಿದ್ದಾನೆ.

ಅಕ್ಟೋಬರ್ 9 ರಂದು ತಕ್ಷಿತ್ ಬೆಂಗಳೂರಿನ ಮಡಿವಾಳ ಪೊಲೀಸ್ ಠಾಣೆಯಲ್ಲಿ ಇರುವ ಗ್ರ್ಯಾಂಡ್ ಚಾಯ್ಸ್ ಲಾಡ್ಜ್ ನಲ್ಲಿ ಪ್ರೇಯಸಿ ಪ್ರಿಯಾಂಕಾ ಜೊತೆ ಬಂದು ರೂಮ್ ಮಾಡಿದ್ದ. 8 ದಿನಗಳ ಕಾಲ ಲಾಡ್ಜ್ ನಲ್ಲಿ ಲವರ್ಸ್ ಗಳುವಾಸವಿದ್ದರು.

9ನೇ ದಿನ ನಿಗೂಢವಾಗಿ ಹುಡುಗ ಶವವಾಗಿ ಪತ್ತೆಯಾಗಿದ್ದಾನೆ. ಯುವಕ ಸಾವನ್ನಪ್ಪುವ ಮುಂಚೆಯೇ ಯುವತಿ ಬೆಂಗಳೂರನ್ನು ತೊರೆದಿದ್ದಳು ಎನ್ನಲಾಗಿದೆ. ಇದರಿಂದಾಗಿ ಸಾವಿನ ಸುತ್ತ ಹಲವು ಅನುಮಾನಗಳು ವ್ಯಕ್ತವಾಗಿದೆ.

ಶುಕ್ರವಾರ ರಾತ್ರಿ ಲಾಡ್ಜ್ ಸಿಬ್ಬಂದಿ ರೂಮ್ ನ ಬಾಗಿಲು ತಟ್ಟಿದ್ದಾರೆ. ಆದರೆ, ತಕ್ಷಿತ್ ನ ರೂಮ್ ನಿಂದ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ. ಮಾಸ್ಟರ್ ಕೀ ಬಳಸಿ ರೂಮ್ ತೆರೆದಿರುವ ಲಾಡ್ಜ್ ಸಿಬ್ಬಂದಿಗೆ ತಕ್ಷಿತ್ ನ ಮೃತದೇಹ ಕಾಣಿಸಿದೆ.

ತಕ್ಷಣ ಮಡಿವಾಳ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಎಲ್ಲಾ ಕೋಣೆಗಳಲ್ಲಿಯೂ ತನಿಖೆ ಆರಂಭಿಸಿದ್ದಾರೆ. ಮೇಲ್ನೋಟಕ್ಕೆ ತಕ್ಷಿತ್ ಗೆ ಹೃದಯಾಘಾತ ಆಗಿರೋ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಯುಡಿಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *