Breaking
11 May 2026, Mon

ಬ್ಲ್ಯಾಕ್‌ಮೇಲ್ ಆರೋಪ: ಅಭಿಷೇಕ್ ಆತ್ಮಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ನಿರೀಕ್ಷಾ ಬಂಧನ

ಮಂಗಳೂರು: ಕಾರ್ಕಳದ ನಿಟ್ಟೆಯ ಅಭಿಷೇಕ್‌ ಆಚಾರ್ಯ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಯುವತಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಬಂಧಿತೆಯನ್ನು ಚಿಕ್ಕಮಗಳೂರು ಮೂಲದ, ಮಂಗಳೂರಿನ ಕಂಕನಾಡಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ನಿರೀಕ್ಷಾ ಎಂದು ಗುರುತಿಸಲಾಗಿದೆ.

ಯುವತಿ ಬಟ್ಟೆ ಬದಲಾಯಿಸುವ ವೀಡಿಯೋವನ್ನು ಚಿತ್ರೀಕರಿಸಿ ಬ್ಲ್ಯಾಕ್ ಮೇಲ್ ಮಾಡಿದ್ದಾರೆಂಬ ಆರೋಪದಡಿಯಲ್ಲಿ ಮಂಗಳೂರಿನ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ನಿರೀಕ್ಷಾಳನ್ನು ಅ.19 ರಂದು ಪೊಲೀಸರು ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದು ನ್ಯಾಯಾಧೀಶರು 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

Leave a Reply

Your email address will not be published. Required fields are marked *