ಬಂಟ್ವಾಳ: ವಿಶ್ವ ಹಿಂದೂ ಪರಿಷದ್ ಭಜರಂಗದಳ ಮಾತೃ ಶಕ್ತಿ ದುರ್ಗ ವಾಹಿನಿ, ಮಂಚಿ ಘಟಕ, ಕಲ್ಲಡ್ಕ ಪ್ರಖಂಡ ಶ್ರೀ ಮಹಾ ಪವಮಾನಯಾಗ ಸಮಿತಿ 2025 ಇದರ ಜಂಟಿ ಸಹಭಾಗಿತ್ವದಲ್ಲಿ ಶ್ರೀ ಮಹಾಪವಮಾನಯಾಗ ಶ್ರೀರಾಮ ತಾರಕ ಯಜ್ಞ ಸಾಮೂಹಿಕ ಗೋಪೂಜೆ, ಧರ್ಮ ಜಾಗೃತಿ ಸಭೆಯು ಅ. 26ಆದಿತ್ಯವಾರದಂದು ಶ್ರೀ ಮೋಂತಿಮಾರು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆಯಲಿದೆ.


ಈ ಮಹಾ ಪವಮಾನ ಯಾಗದ ದೀಪೋಜ್ವಲನೆಯನ್ನು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ನೆರವೇರಿಸಲಿದ್ದಾರೆ.

ಬೆಳಿಗ್ಗೆ 11:30ಕ್ಕೆ ಧರ್ಮ ಜಾಗೃತಿ ಸಭೆ ನಡೆಯಲಿದ್ದು ಕನ್ಯಾಡಿ ಶ್ರೀ ರಾಮ ಕ್ಷೇತ್ರದ ಶ್ರೀ ಶ್ರೀ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಆಶೀರ್ವಚನವನ್ನು ನೀಡಲಿದ್ದಾರೆ. ಯಾಗ ಫಲ ಸಂದೇಶವನ್ನು ಮಾಜಿ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಕಶೆಕೋಡಿ ಸೂರ್ಯನಾರಾಯಣ ಭಟ್ ನೀಡಲಿದ್ದು, ಕರ್ನಾಟಕದ ದಕ್ಷಿಣ ಪ್ರಾಂತ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪಿ ಎಸ್ ಪ್ರಕಾಶ್ ಧಾರ್ಮಿಕ ಉಪನ್ಯಾಸವನ್ನು ನೀಡಲಿದ್ದಾರೆ.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು, ಮಂಗಳೂರಿನ ಸಂಸದ ಕ್ಯಾ. ಬ್ರಿಜೇಶ್ ಚೌಟ , ಹಿಂದೂ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ, ವಿಶ್ವ ಹಿಂದೂ ಪರಿಷತ್ ಪ್ರಾಂತ್ಯದ ಕಾರ್ಯದರ್ಶಿ ಶರಣ್ ಪಂಪ್ವೆಲ್ ಸೇರಿದಂತೆ ಅನೇಕರು ಭಾಗವಹಿಸಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಕ್ಷೇತ್ರ ಮೊಂತಿಮಾರ್ ಅಧ್ಯಕ್ಷ ಶ್ರೀ ಮಹಾಪವಮಾನ ಯಾಗ ಸಮಿತಿ ಪೂರ್ವ ಆಡಳಿತ ಮೊಕ್ತೇಸರರು ವಿಕಾಸ್ ಕುಮಾರ್ ಪಿ ವಹಿಸಲಿದ್ದಾರೆ.


