Breaking
23 Mar 2026, Mon

ಚನ್ನಪಟ್ಟಣದಲ್ಲಿ ನೀರಿನ ಟಬ್ ಒಳಗೆ ಬಿದ್ದು 11 ತಿಂಗಳ ಮಗು ಸಾವು

ಚನ್ನಪಟ್ಟಣ: 11 ತಿಂಗಳ ಮಗು ನೀರಿನ ಟಬ್ ಒಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ಚನ್ನಪಟ್ಟಣದಲ್ಲಿ ನಡೆದಿದೆ.

ಖುಷಿ ಮೃತಪಟ್ಟ ಮಗು. ಮನೆ ಒರೆಸುವ ಸಲುವಾಗಿ ಟಬ್‌ಗೆ ನೀರನ್ನು ತುಂಬಿಸಿ ಇಡಲಾಗಿತ್ತು. ಅಲ್ಲೇ ಕಂದಮ್ಮ ಆಟವಾಡಿಕೊಂಡಿತ್ತು. ಈ ವೇಳೆ ಮಗುವಿನ ತಂದೆ ಶಂಷಾದ್ ಕೆಲಸ ಮುಗಿಸಿಕೊಂಡು ಮನೆಗೆ ಬಂದಿದ್ದು, ತೀವ್ರ ಬಾಯಾರಿಕೆಯಿಂದ ಬಳಲಿದ್ದ ಅವರು ಪತ್ನಿಯ ಬಳಿ ಕುಡಿಯಲು ನೀರು ಕೇಳಿದ್ದಾರೆ. ಪತ್ನಿ ಪತಿಗಾಗಿ ನೀರು ತರಲು ಒಳಗೆ ಹೋಗಿ ಬರುವಷ್ಟರಲ್ಲಿ ಆಟವಾಡುತ್ತಿದ್ದ ಮಗು ಟಬ್ ಒಳಗೆ ಬಿದ್ದಿದೆ ಎನ್ನಲಾಗಿದೆ.

ಟಬ್‌ಗೆ ಬಿದ್ದ ತಕ್ಷಣವೇ ಮಗುವಿಗೆ ಪ್ರಜ್ಞೆ ತಪ್ಪಿದ್ದು ಇದರಿಂದ ಭಯಗೊಂಡ ಪೋಷಕರು ಕೂಡಲೇ ಹತ್ತಿರದ ಆಸ್ಪತೆಗೆ ಮಗುವನ್ನು ಕರೆದೊಯ್ದಿದ್ದಾರೆ. ಆದರೆ ಅಷ್ಟರಲ್ಲೇ ಮಗು ಮೃತಪಟ್ಟಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *