Breaking
23 Mar 2026, Mon

ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

ಬೆಳ್ತಂಗಡಿ : ತಾಲೂಕಿನ ಸೌತಡ್ಕದ ಸೇವಾಧಾಮ ಪುನಶ್ಚೇತನ ಕೇಂದ್ರದಲ್ಲಿ ದೀಪಾವಳಿ ಹಬ್ಬವನ್ನು ಅಕ್ಟೋಬರ್ 20 ರಂದು ಬಹಳ ಅದ್ದೂರಿಯಾಗಿ ಆಚರಿಸಲಾಯಿತು.

ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರು ಸಮುದಾಯದಿಂದ ದೂರ ಉಳಿಯುವುದು ಮಾನಸಿಕ ಖಿನ್ನತೆಗೆ ಹಾಗೂ ಹಲವು ದ್ವಿತೀಯಾಂತರ ಸಮಸ್ಯೆಗಳಿಗೆ ಒಳಗಾಗಿರುತ್ತಾರೆ. ಇಂತಹ ದಿವ್ಯಾಂಗರನ್ನು ಒಗ್ಗೂಡಿಸಿ ಅವರಿಗೆ ವೈದ್ಯಕೀಯ ಸೌಲಭ್ಯಗಳನ್ನು ನೀಡುವುದರ ಮೂಲಕ ಅವರ ಜೀವನ ಶೈಲಿಯನ್ನು ಸುಲಭಗೊಳಿಸುವ ಪ್ರಯತ್ನ ನಮ್ಮ ಸೇವಾಧಾಮ ಸಂಸ್ಥೆಯಿOದ ನಿರಂತರವಾಗಿ ನಡೆಯುತ್ತಿದೆ.

CR 3 (India) private limited ನ ಸೀನಿಯರ್ ಎಚ್ ಆರ್ ಎಕ್ಸಿಕ್ಯೂಟಿವ್ ಗಣೇಶ್ ಟಿ ರವರು ದೀಪಾವಳಿಯ ವಿಶೇಷತೆ ಬಗ್ಗೆ ತಿಳಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ, ಫಲಾನುಭವಿಗಳಿಗೆ, ಆರೈಕೆದಾರರಿಗೆ ಹಾಗೂ ಸಿಬ್ಬಂದಿವರ್ಗದವರಿಗೆ ವಿಭಿನ್ನ ಚಟುವಟಿಕೆಗಳನ್ನು ಮಾಡಿ ಜೊತೆಗೆ ನೃತ್ಯ ಪ್ರದರ್ಶನವನ್ನು ನೀಡಿ ಎಲ್ಲರನ್ನು ಮನರಂಜಿಸಲಾಯಿತು. ಹಾಗೇ ಮುಂಡಾಜೆಯ ವಿಧ್ಯಾ ಬೆಂಡೆಯವರು ತಮ್ಮ ಹುಟ್ಟುಹಬ್ಬವನ್ನು ಈ ಸಂದರ್ಭದಲ್ಲಿ ಆಚರಿಸಿಕೊಂಡರು ದೇಣಿಗೆಯನ್ನು ನೀಡಿ ಸಹಕರಿಸಿದ್ದಾರೆ. ಅಮೃತಗಳಿಗೆಯಲ್ಲಿ ಅಮೃತ ಹಸ್ತದಲ್ಲಿ ಹಣತೆಯನ್ನು ಹಚ್ಚಿ ಪಟಾಕಿಯನ್ನು ಸಿಡಿಸಿ ದೀಪಾವಳಿಯನ್ನು ಸಂಭ್ರಮಿಸಲಾಯಿತು.

ಈ ಸಂದರ್ಭದಲ್ಲಿ ಮುಂಡಾಜೆಯ ವಿಶ್ವನಾಥ್ ಬೆಂಡೆ, ಸೇವಾಧಾಮ ಸಂಸ್ಥಾಪಕರಾದ ಕೆ ವಿನಾಯಕ ರಾವ್, ಸಂಸ್ಥೆಯ ದಾನಿಗಳು, ಹಿತೈಷಿಗಳು, ಸಲಹಾ ಸಮಿತಿಯ ಸದಸ್ಯರು, ಟ್ರಸ್ಟಿಗಳು, ಫಲಾನುಭವಿಗಳು, ಸನಿವಾಸಿಗಳು, ಆರೈಕೆದಾರರು, ಸ್ವಯಂಸೇವಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಒಟ್ಟು 70 ಮಂದಿ ಭಾಗವಹಿಸಿದ್ದರು. ಸೇವಾಧಾಮದ ಫಿಸಿಯೊಥೆರಪಿಸ್ಟ್ ಕು. ವಿಖ್ಯಾತಿ ಸ್ವಾಗತಿಸಿ, ನಿರೂಪಿಸಿದರು. ಸೇವಾಭಾರತಿಯ ಫಂಡ್ ರೈಸಿಂಗ್ ಮತ್ತು ಮಾರ್ಕೆಟಿಂಗ್ ಮ್ಯಾನೇಜರ್ ಆಶ್ರಿತ್ ಸಿ.ಪಿ ಧನ್ಯವಾದವಿತ್ತರು.

Leave a Reply

Your email address will not be published. Required fields are marked *