Breaking
10 May 2026, Sun

ಬ್ರಹ್ಮಾವರದಲ್ಲಿ ಚಲಿಸುತ್ತಿದ್ದ ಬೈಕ್ ಗೆ ಅಡ್ಡ ಬಂದ ಚಿರತೆ – ಸವಾರನಿಗೆ ಗಂಭೀರ ಗಾಯ, ಚಿರತೆ ಸಾವು

ಉಡುಪಿ: ಚಿರತೆಯೊಂದು ಚಲಿಸುತ್ತಿದ್ದ ಬೈಕ್‌ಗೆ ಅಡ್ಡ ಬಂದ ಪರಿಣಾಮ ಸವಾರ ನಿಯಂತ್ರಣ ತಪ್ಪಿ ಚಿರತೆಗೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡು, ಚಿರತೆ ಸ್ಥಳದಲ್ಲೇ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ನಾಲ್ಕೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ನಂಚಾರ್ ಎಂಬಲ್ಲಿ ನಡೆದಿದೆ.

ಗಂಭೀರ ಗಾಯಗೊಂಡ ಬೈಕ್ ಸವಾರ ನಂಚಾರ್ ನಿವಾಸಿ ಭಾಸ್ಕರ್ ಶೆಟ್ಟಿ ಎಂದು ಗುರುತಿಸಲಾಗಿದೆ.

ಭಾಸ್ಕರ್ ಶೆಟ್ಟಿ ಅವರು ರಾತ್ರಿ ತನ್ನ ಬೈಕ್ ನಲ್ಲಿ ಮನೆಗೆ ಬರುತ್ತಿದ್ದ ವೇಳೆ ಒಮ್ಮೆಲೇ ಚಿರತೆಯೊಂದು ಅಡ್ಡ ಬಂದ ಪರಿಣಾಮ ಸವಾರ ನಿಯಂತ್ರಣ ತಪ್ಪಿ ಚಿರತೆಗೆ ಡಿಕ್ಕಿ ಹೊಡೆದು ಬೈಕ್ ಪಲ್ಟಿ ಯಾಗಿದೆ. ಡಿಕ್ಕಿಯ ರಭಸಕ್ಕೆ ಚಿರತೆ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದು, ಬೈಕ್ ಸವಾರ ಗಂಭೀರ ಗಾಯ ಗೊಂಡಿದ್ದಾರೆ. ಅವರನ್ನು ತಕ್ಷಣ ಸ್ಥಳೀಯರು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಹೆಬ್ರಿ ಅರಣ್ಯ ಇಲಾಖೆಯವರು ಸ್ಥಳಕ್ಕಾಗಮಿಸಿ ಮೃತಪಟ್ಟ ಚಿರತೆಯನ್ನು ಪರಿಶೀಲಿಸಿದ್ದಾರೆ.

ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *