ಬೆಳ್ತಂಗಡಿ: ಖಾಸಗಿ ಶಾಲೆ ಶಿಕ್ಷಕಿಯೊಬ್ಬರು ಬಾವಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿ ಬೂಡುಮುಗೇರುವಿನಲ್ಲಿ ಅ.23 ರಂದು ನಡೆದಿದೆ.

ಬೂಡುಮುಗೇರು ನಿವಾಸಿ ಗೋಪಾಲಕೃಷ್ಣ ಅನುದಾನಿತ ಶಾಲೆಯಲ್ಲಿ ಕಳೆದ 2 ವರ್ಷದಿಂದ ಶಿಕ್ಷಕಿಯಾಗಿ ಕೆಲಸ ನಿರ್ವಹಿಸುತ್ತಿದ್ದ ತೇಜಸ್ವಿನಿ (23) ಅವರು ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ತೇಜಸ್ವಿನಿ ಅವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರೆನ್ನಲಾಗಿದ್ದು, ಕಾಲು ಜಾರಿ ಬಾವಿಗೆ ಬಿದ್ದರೇ, ಅಥವಾ ಆತ್ಮಹತ್ಯೆ ಮಾಡಿಕೊಂಡರೇ ಎಂಬುದು ತಿಳಿದು ಬಂದಿಲ್ಲ.

ಮೃತರು ತಂದೆ, ತಾಯಿ, ಸಹೋದರಿಯರನ್ನು ಅಗಲಿದ್ದಾರೆ
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.



