Breaking
24 Mar 2026, Tue

ಸುರತ್ಕಲ್ ನಲ್ಲಿ ಇಬ್ಬರು ಯುವಕರಿಗೆ ಚೂರಿ ಇರಿತ

ಸುರತ್ಕಲ್: ಇಬ್ಬರು ಯುವಕರ ಮೇಲೆ ದುಷ್ಕರ್ಮಿಗಳ ತಂಡ ಚೂರಿ ಇರಿದು ಪರಾರಿಯಾದ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕಾನ ಎಂಬಲ್ಲಿ ಅ.23 ರಂದು ರಾತ್ರಿ ನಡೆದಿದೆ.

ಆರೋಪಿಗಳನ್ನು ಅಲೆಕ್ಸ್ ಸಂತೋಷ್, ಸುಶಾಂತ್ ಮತ್ತು ನಿತಿನ್ ಎಂದು ಗುರುತಿಸಲಾಗಿದೆ.

ಘಟನೆಯಲ್ಲಿ ಸುರತ್ಕಲ್ ಚೊಕ್ಕಬೆಟ್ಟು ನಿವಾಸಿ ನಿಝಾಮ್ (23) ಮತ್ತು ಕೃಷ್ಣಾಪುರ ಹಿಲ್ ಸೈಡ್ ನಿವಾಸಿ ಹಸನ್ ಮುರ್ಷಿದ್ (18) ಗಾಯಗೊಂಡವರಾಗಿದ್ದಾರೆ.

ಗಾಯಾಳುಗಳಾದ ನಿಝಮ್ ಮತ್ತು ಮುರ್ಷಿದ್ ಇತರ ಸ್ನೇಹಿತರೊಂದಿಗೆ ದೀಪಕ್ ಬಾರ್ ಗೆ ಮದ್ಯ ಖರೀದಿಸಲು ಹೋಗಿದ್ದುರು. ಈ ವೇಳೆ ಅಲ್ಲಿಗೆ ಬಂದ ನಾಲ್ವರು ಯುವಕರ ತಂಡ ಚೂರಿಯಿಂದ ಇರಿದಿದೆ.

ನಿಝಾಮ್ ಹೊಟ್ಟೆಯ ಭಾಗಕ್ಕೆ ಗಂಭೀರ ಗಾಯವಾಗಿದ್ದು ಆತನನ್ನು ಮಂಗಳೂರಿನ ಹೈಲ್ಯಾಂಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ . ಹಸನ್ ಮುರ್ಷಿದ್ ಮುಕ್ಕದ ಶ್ರೀನಿವಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Leave a Reply

Your email address will not be published. Required fields are marked *