ಬೆಂಗಳೂರು: ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಶಿವಗಂಗೆಯಲ್ಲಿರುವ ಶೃಂಗೇರಿ ಶಾಖಾ ಮಠದ ಶ್ರೀ ಪುರುಷೋತ್ತಮ ಭಾರತೀ ಸ್ವಾಮೀಜಿ (75) ಬಹು ಅಂಗಾಂಗ ವೈಫಲ್ಯದಿಂದ ವಿಧಿವಶರಾಗಿದ್ದಾರೆ.

ಅನಾರೋಗ್ಯದ ಹಿನ್ನಲೆ ಸ್ವಾಮೀಜಿಗಳನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಶ್ರೀ ಗಳನ್ನು ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ವಿಧಿವಶರಾಗಿದ್ದಾರೆ. ಇಂದು ಮಧ್ಯಾಹ್ನ 2 ಗಂಟೆಗೆ ಮಠದ ಆವರಣದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಮಧ್ಯಾಹ್ನದವರೆಗೆ ಶಿಷ್ಯರು ಅಂತಿಮ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಗಣ್ಯರು ಸಂತಾಪ ಸೂಚಿಸಿದ್ದಾರೆ.



