ಬಂಟ್ವಾಳ: ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಬೆಂಕಿ ಹೊತ್ತಿಕೊಂಡಿದ್ದು ಯುವಕನ ಸಮಯಪ್ರಜ್ಞೆಯಿಂದ ಭಾರೀ ದೊಡ್ಡ ಮಟ್ಟದ ಅನಾಹುತವೊಂದು ತಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಅನಂತಾಡಿ ಗ್ರಾಮದ ಬಾಬನಕಟ್ಟೆ ಸಮೀಪದ ಹಿರ್ತಂದ ಬೈಲಿನಲ್ಲಿ ಅ.23 ರಾತ್ರಿ ನಡೆದಿದೆ.

ಯುವಕ ಜಯರಾಜ್ ಸಮಯಪ್ರಜ್ಞೆ ಮೆರೆದಿದ್ದು ಮನೆಮಂದಿ ಸುರಕ್ಷಿತವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಆದರೆ ಈ ವೇಳೆ ಜಯರಾಜ್‌ಗೆ ಮುಖ ಮತ್ತು ಕೈಗೆ ಗಾಯಗಳಾಗಿದ್ದು, ದ್ವಿಚಕ್ರ ವಾಹನ ಸೇರಿದಂತೆ ಮನೆಯ ಕಿಟಕಿ, ಬಾಗಿಲು, ವಿದ್ಯುತ್ ಉಪಕರಣಗಳು ಮತ್ತು ಇತರ ಸಾಮಗ್ರಿಗಳಿಗೆ ವ್ಯಾಪಕ ಹಾನಿಯಾಗಿದೆ.

ಜಯರಾಜ್ ಮತ್ತು ಅವರ ತಾಯಿ ಸುಶೀಲಾ ವಾಸವಾಗಿರುವ ಈ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಖಾಲಿಯಾದ ಹಿನ್ನೆಲೆಯಲ್ಲಿ ಹೊಸ ಸಿಲಿಂಡರ್ ಅಳವಡಿಸಲಾಗಿತ್ತು. ಆದರೆ, ರೆಗ್ಯುಲೇಟರ್‌ನಲ್ಲಿ ವಾಶರ್ ಇರದ ಕಾರಣ ಗ್ಯಾಸ್ ಸೋರಿಕೆಯಾಗಿ ಒಮ್ಮೆಲೇ ಬೆಂಕಿ ಹೊತ್ತಿಕೊಂಡು ಅಡುಗೆ ಕೋಣೆಯಲ್ಲಿ ಬೆಂಕಿಯ ಜ್ವಾಲೆ ಆವರಿಸಿದೆ.

ಈ ವೇಳೆ ಜಯರಾಜ್ ಅವರು ಬೆಂಕಿಯ ನಡುವೆಯೂ ಸಿಲಿಂಡರ್‌ನ್ನು ಎತ್ತಿ ಮನೆಯಿಂದ ಹೊರಗಿಟ್ಟರು. ಈ ಸಂದರ್ಭ ಸ್ಥಳೀಯ ನಿವಾಸಿಗಳಾದ ನೆರೆಯ ವೆಂಕಪ್ಪ ಪೂಜಾರಿ, ಒದ್ದೆ ಗೋಣಿಚೀಲದಿಂದ ಬೆಂಕಿಯನ್ನು ನಂದಿಸಿದರು.
ಘಟನಾ ಸ್ಥಳಕ್ಕೆ ಅನಂತಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಜಾತ, ಮಾಜಿ ಅಧ್ಯಕ್ಷರಾದ ಗಣೇಶ್, ಸನತ್ ಕುಮಾರ್ ರೈ, ಗಣೇಶ್ ಬಂಟ್ರಿAಜ, ಉಮೇಶ್ ನೆಡ್ಯಾರ ಮತ್ತು ಗ್ರಾಮ ಕರಣಿಕರು ಭೇಟಿ ನೀಡಿದ್ದಾರೆ. ಬಂಟ್ವಾಳದ ಕಾರಿಂಜೇಶ್ವರ ಗ್ಯಾಸ್ ಏಜೆನ್ಸಿಯ ಕರುಣಾಕರ ಶೆಟ್ಟಿ, ಘಟನೆಗೆ ಕಾರಣವಾದ ತಾಂತ್ರಿಕ ದೋಷಕ್ಕೆ ಪರಿಹಾರ ಕ್ರಮದ ಭರವಸೆ ನೀಡಿದ್ದಾರೆ.

ಜಯರಾಜ್ ನನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಗ್ಯಾಸ್ ಸಿಲಿಂಡರ್‌ನ ರೆಗ್ಯುಲೇಟರ್‌ನಿಂದ ಸೋರಿಕೆಯಾದ ಕಾರಣವೇ ಈ ಅವಘಡಕ್ಕೆ ಮೂಲ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಘಟನೆಯಿಂದಾಗಿ ಮನೆಯ ವಿದ್ಯುತ್ ಉಪಕರಣಗಳು, ಕಿಟಕಿ-ಬಾಗಿಲು, ದ್ವಿಚಕ್ರ ವಾಹನ ಮತ್ತು ಇತರ ವಸ್ತುಗಳಿಗೆ ಗಂಭೀರ ಹಾನಿಯಾಗಿದೆ.

ಘಟನಾ ಸ್ಥಳಕ್ಕೆ ಅನಂತಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಜಾತ, ಮಾಜಿ ಅಧ್ಯಕ್ಷರಾದ ಗಣೇಶ್, ಸನತ್ ಕುಮಾರ್ ರೈ, ಗಣೇಶ್ ಬಂಟ್ರಿಂಜ, ಉಮೇಶ್ ನೆಡ್ಯಾರ ಮತ್ತು ಗ್ರಾಮ ಕರಣಿಕರು ಭೇಟಿ ನೀಡಿದ್ದಾರೆ. ಬಂಟ್ವಾಳದ ಕಾರಿಂಜೇಶ್ವರ ಗ್ಯಾಸ್ ಏಜೆನ್ಸಿಯ ಕರುಣಾಕರ ಶೆಟ್ಟಿ, ಘಟನೆಗೆ ಕಾರಣವಾದ ತಾಂತ್ರಿಕ ದೋಷಕ್ಕೆ ಪರಿಹಾರ ಕ್ರಮದ ಭರವಸೆ ನೀಡಿದ್ದಾರೆ.
ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.


