Breaking
23 Mar 2026, Mon

ನೆಲಮಂಗಲದ ಟಿ. ಬೇಗೂರು ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ,ಇಬ್ಬರು ಸ್ಥಳದಲ್ಲೇ ಸಾವು, ಮೂವರು ಗಂಭೀರ

ಬೆಂಗಳೂರು : ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಟಿ. ಬೇಗೂರು ಅ.24 ರಂದು ನಡೆದಿದೆ.

ಕಾರಿನಲ್ಲಿದ್ದ ಶಿವಲಿಂಗ ಗೌಡ (60) ಮತ್ತು ಪ್ರಮೀಳಾ (55) ಸ್ಥಳದಲ್ಲೇ ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಉಳಿದ ಮೂವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಕೆಲವು ಮಾಹಿತಿಯ ಪ್ರಕಾರ, ಗದಗ ಜಿಲ್ಲೆಯ ರೋಣಾದಿಂದ ಬೆಂಗಳೂರಿನ ನಾರಾಯಣ ಆಸ್ಪತ್ರೆಗೆ ಬರುತ್ತಿದ್ದ ಮಾರುತಿ ಎರ್ಟಿಗಾ ಕಾರು, ಮುಂದೆ ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದಿದೆ. ಲಾರಿ ಚಾಲಕ ಏಕಾಏಕಿ ಬ್ರೇಕ್ ಹಾಕಿದ ಪರಿಣಾಮವಾಗಿ ಕಾರು ನಿಯಂತ್ರಣ ತಪ್ಪಿ ಲಾರಿಗೆ ಢಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.

ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಅಪಘಾತದ ಪರಿಣಾಮವಾಗಿ ಹೆದ್ದಾರಿಯಲ್ಲಿ ಕೆಲವು ಸಮಯ ಸಂಚಾರ ದಟ್ಟಣೆ ಉಂಟಾಗಿ ವಾಹನಗಳು ನಿಧಾನವಾಗಿ ಚಲಿಸಬೇಕಾಯಿತು.

ಪೊಲೀಸರು ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ನಡೆಯುತ್ತಿದೆ.

ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *