Breaking
23 Mar 2026, Mon

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

ಶಿವಮೊಗ್ಗ: ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕೊಪ್ಪ ಮಾರ್ಗ ಮಧ್ಯೆಯ ಕುಂಬಾರದಡಿಗೆ ಬಳಿ ನಡೆದಿದೆ.

ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಕೊಪ್ಪ ಭಾಗದಿಂದ ತೀರ್ಥಹಳ್ಳಿಗೆ ಬರುವಾಗ ಈ ಅವಘಡ ಸಂಭವಿಸಿದ್ದು ವಿದ್ಯುತ್ ಕಂಬ ಮುರಿದು ಬಿದ್ದಿದೆ. ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿರುವ ಸಾಧ್ಯತೆ ಇದೆ ಎನ್ನಲಾಗಿದೆ.

ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *