ಬೆಳ್ತಂಗಡಿ: ಪೂಂಜದ ಶ್ರೀ ಪಂಚದುರ್ಗಾಪರಮೇಶ್ವರೀ ದೇವಸ್ಥಾನದ ಶ್ರೀ ಕ್ಷೇತ್ರದಲ್ಲಿ ಸಾನಿಧ್ಯಾಭಿವೃದ್ಧಿ ಹಾಗೂ ಲೋಕ ಕಲ್ಯಾಣಾರ್ಥವಾಗಿ ಪ್ರಥಮ ಬಾರಿಗೆ ಶತಚಂಡಿಕಾ ಯಾಗವು ನ. 01 ಶನಿವಾರದಂದು ನಡೆಯಲಿದೆ.

ಬೆಳಿಗ್ಗೆ 7:00 ಗಂಟೆಗೆ ಶತಾ ಚಂಡಿಕಾಯಾಗ, ಬೆಳಿಗ್ಗೆ 11 ಗಂಟೆಗೆ ಪೂರ್ಣಾಹುತಿ ಹಾಗೂ ಮಧ್ಯಾಹ್ನ 12 ಗಂಟೆಗೆ ಪ್ರಸಾದ ವಿತರಣೆ ಬಳಿಕ ಅನ್ನ ಸಂತರ್ಪಣೆ ನಡೆಯಲಿದೆ.

ನವೆಂಬರ್ 16 ರಂದು ಸಂಜೆ 7 ಗಂಟೆಗೆ ವಾರ್ಷಿಕ ಕಾರ್ತಿಕ ದೀಪೋತ್ಸವ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ


