ಹಾಸನ: ಭಾರೀ ಮಳೆಗೆ ಗೋಡೆ ಕುಸಿದು ವೃದ್ಧೆಯೊಬ್ಬರು ಸಾವನ್ನಪ್ಪಿದ ಘಟನೆ ಹಾಸನದ ಅರಕಲಗೂಡು ತಾಲೂಕಿನ ಮತ್ತಿಗೋಡು ಗ್ರಾಮದಲ್ಲಿ ನಡೆದಿದೆ.

ಮಹಿಳೆಯನ್ನು ಜವರಮ್ಮ (63) ಮೃತ ದುರ್ದೈವಿಯಾಗಿದ್ದಾರೆ.
ಮುಂಜಾನೆ 5:30ರ ಸುಮಾರಿಗೆ ಈ ಘಟನೆ ನಡೆದಿದ್ದು, ಮನೆಯಲ್ಲಿ ಮಲಗಿದ್ದ ವೃದ್ಧೆಯ ಮಗ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಸ್ಥಳಕ್ಕೆ ಸ್ಥಳೀಯ ಶಾಸಕ ಎ.ಮಂಜು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಸೂಕ್ತ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಕೊಣನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



