Breaking
9 May 2026, Sat

ಅಪರಾಧ ಪ್ರಕರಣಗಳಲ್ಲಿ ಭಾಗಿಯಾದವರ ಜತೆ ತಿರುಗಾಡುವವರಿಗೂ ತೊಂದರೆ ಆಗಲಿದೆ – ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ

ಮಂಗಳೂರು: ಕೇಸ್ ಇದ್ದವರ ಜತೆ ತಿರುಗಾಡಿದ್ರೆ ನಿಮಗೆ ತೊಂದರೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿಯವರಿಂದ ಮತ್ತೊಮ್ಮೆ ಎಚ್ಚರಿಕೆ ನೀಡಿದ್ದಾರೆ.

ಮಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ಪ್ರಕರಣದಲ್ಲಿ ಭಾಗಿಯಾದವರ ಜತೆ ಯಾವುದೇ ಪ್ರಕರಣ ಇಲ್ಲದವರು ತಿರುಗಾಡದಂತೆ ಈಗಾಗಲೇ ನಾವು ಎಚ್ಚರಿಕೆ ನೀಡಿದ್ದೇವೆ.ಸರಿಯಾಗಿ ಕೇಳಿಸಿದಂತೆ ಕಾಣುತ್ತಿಲ್ಲ. ಈಗಾಗಲೇ ಅಪರಾಧ ಪ್ರಕರಣಗಳಲ್ಲಿ ಭಾಗಿಯಾದವರ ಜತೆ ತಿರುಗಾಡುವವರಿಗೂ ತೊಂದರೆ ಆಗಲಿದೆ.

ಇಲ್ಲ ನಾವು ತಿರುಗುತ್ತೇವೆ. ನಮ್ಮ ಇಷ್ಟ ಎಂದು ನೀವು ಬಯಸಿದರೆ ನಮಗೆ ಸಮಸ್ಯೆ ಇಲ್ಲ. ನೀವು ಮಾಡುವುದು ನೀವು ಮಾಡಿ, ನಾವು ಮಾಡುವುದು ನಾವು ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

Leave a Reply

Your email address will not be published. Required fields are marked *