ಸುರತ್ಕಲ್: ಮಂಗಳೂರು ಹೊರವಲಯದ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕಾನಾದ ಬಳಿ ಅ.23ರಂದು ಯುವಕರಿಬ್ಬರಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳು ಹಾಗೂ ಅವರಿಗೆ ಆಶ್ರಯ ನೀಡಿದ್ದ ಒಬ್ಬ ವ್ಯಕ್ತಿ ಸೇರಿದಂತೆ ಒಟ್ಟು ನಾಲ್ವರನ್ನು ಅ.24ರಂದು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಸುರತ್ಕಲ್ ನ ಕಾನಾ ನಿವಾಸಿ ಸುಶಾಂತ್ (29), ಕೆ ವಿ ಅಲೆಕ್ಸ್(27), ಸುರತ್ಕಲ್ ನಿವಾಸಿ ನಿತಿನ್(26) ಹಾಗೂ ಆರೋಪಿಗಳಿಗೆ ಆಶ್ರಯ ಕೊಟ್ಟ ವ್ಯಕ್ತಿ ಸುರತ್ಕಲ್ ನ ಆರುಣ್ ಶೆಟ್ಟಿ (56) ಎಂದು ಗುರುತಿಸಲಾಗಿದೆ.

ಪ್ರಕರಣದ ಪ್ರಮುಖ ಆರೋಪಿ ಗುರುರಾಜ್ ಆಚಾರಿ ಹಾಗೂ ಆರೋಪಿಗಳಿಗೆ ಅರುಣ್ ಶೆಟ್ಟಿಯೊಂದಿಗೆ ಅಶ್ರಯ ನೀಡಿದ್ದ ಅಶೋಕ್ ಸದ್ಯ ತಲೆಮರೆಸಿಕೊಂಡಿದ್ದು ಆತನಿಗಾಗಿ ಪತ್ತೆ ಕಾರ್ಯ ಮುಂದುವರಿದಿದೆ.
ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.

ಅ.23ರoದು ರಾತ್ರಿ ಕಾನಾದ ಬಾರ್ ವೊಂದರ ಬಳಿ ಕ್ಷುಲ್ಲಕ ಕಾರಣಕ್ಕಾಗಿ ಹಸನ್ ಮುಕ್ಷಿತ್ ಮತ್ತು ನಿಝಾಂ ಎಂಬ ಯುವಕರಿಗೆ ಚೂರಿಯಿಂದ ಇರಿಯಲಾಗಿತ್ತು. ಈ ಕೃತ್ಯದಲ್ಲಿ ಈ ಹಿಂದೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಗುರುರಾಜ್ ಆಚಾರಿ, ಅಲೆಕ್ಸ್ ಸಂತೋಷ್, ನಿತಿನ್ ಮತ್ತು ಸುಶಾಂತ್ ಭಾಗಿಯಾಗಿದ್ದರು.

ಉಪ ಪೊಲೀಸ್ ಆಯುಕ್ತರು ರವಿಶಂಕರ್, ಸಹಾಯಕ ಪೊಲೀಸ್ ಆಯುಕ್ತ ಶ್ರೀಕಾಂತ್ ಕೆ., ಅವರ ಮಾರ್ಗದರ್ಶನದಲ್ಲಿ ಸುರತ್ಕಲ್ ಪೊಲೀಸ್ ಇನ್ಸ್ಪೆಕ್ಟರ್ ಪ್ರಮೋದ್ ಕುಮಾರ್ ಪಿ. ನೇತೃತ್ವದ ವಿಶೇಷ ತಂಡ ಈ ಕಾರ್ಯಾಚರಣೆ ನಡೆಸಿದೆ.


