Breaking
23 Mar 2026, Mon

ಗೋಕಳ್ಳರ ಮೇಲೆ ಪೈರಿಂಗ್ ಪ್ರಕರಣದ ವಿವಾದಗಳಿಗೆ ಪೊಲೀಸ್ ಇಲಾಖೆ ಸ್ಪಷ್ಟನೆ

ಪುತ್ತೂರು : ಗ್ರಾಮಾಂತರ ಠಾಣಾ ವ್ಯಾಪ್ತಿಯ ಈಶ್ವರಮಂಗಲದ ಬೆಳ್ಳಿಚಡವು ಎಂಬಲ್ಲಿ ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ಗೋಕಳ್ಳರಿಗೆ ಫೈರಿಂಗ್ ಮಾಡಿದ ಪ್ರಕರಣದ ವಿವಾದಕ್ಕೆ ದಕ್ಷಿಣ ಕನ್ನಡ ಪೊಲೀಸ್ ಇಲಾಖೆ ಸ್ಪಷ್ಟನೆ ಕೊಟ್ಟಿದೆ.

ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ದಿನಾಂಕ-22-10-2025 ರಂದು ದಾಖಲಾದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ ಈ ಕೆಳಗಿನ ವಿಷಯಗಳು ಕಂಡುಬಂದಿರುತ್ತದೆ.

  1. ವಾಹನವನ್ನು ಪೋಲಿಸರು ಹಿಂಬಾಲಿಸಿ ಬಳಿಕ ನಿಲ್ಲಿಸಿ ಪ್ರಕರಣವನ್ನು ದಾಖಲಿಸಿಕೊಂಡಿರುತ್ತಾರೆ. ವಾಹನ ನಿಲ್ಲಿಸುವಲ್ಲಿ ಯಾವುದೇ ಸಂಸ್ಥೆಯ ಪಾತ್ರವು ಇರುವುದಿಲ್ಲ ಅಥವಾ ಯಾವ ಸಂಸ್ಥೆಯ ಸಹಕಾರವನ್ನು ಪೊಲೀಸರು ತಗೊಂಡಿರುವುದು ಕಂಡುಬಂದಿರುವುದಿಲ್ಲ. ಪ್ರಕರಣವನ್ನು ನ್ಯಾಯಸಮ್ಮತ ತನಿಖೆಗಾಗಿ ಮರು ದಿನವೇ ಪುತ್ತೂರು ಉಪವಿಭಾಗದ ವ್ಯಾಪ್ತಿಯಿಂದ ವರ್ಗಾಯಿಸಲಾಯಿತು.
  2. ಈ ಘಟನೆಯ ನಂತರ ಪಿಎಸ್ಐ ಬೆಳ್ಳಾರೆ ಹಾಗೂ ಸಿಬ್ಬಂದಿಗಳು ಘಟನಾ ಸ್ಥಳದಲ್ಲಿದ್ದರು. ಉಳಿದ ಅಧಿಕಾರಿಗಳು ತನಿಖಾ ಕ್ರಮದಲ್ಲಿ ತೊಡಗಿಸಿಕೊಂಡಿದ್ದರು ಹಾಗೂ ಗಾಯಗೊಂಡ ಆರೋಪಿಯನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ಸಹಕರಿಸುತ್ತಿದ್ದರು.
  3. ಅರುಣ್ ಕುಮಾರ್ ಪುತ್ತಿಲ ಸ್ಥಳಕ್ಕೆ ಬಂದು ಒಂದು ಜಾನುವಾರು ಸತ್ತಿರುವುದನ್ನು ಗಮನಿಸಿ ಉಳಿದ ಜಾನುವಾರುಗಳಿಗೆ ತೊಂದರೆಯಾಗುತ್ತದೆ ಆದ್ದರಿಂದ ಅದರಲ್ಲಿ ಇರುವ ಜಾನುವಾರುಗಳನ್ನು ಇಳಿಸಬಹುದೇ ಎಂದು ಕೇಳಿರುವುದಾಗಿ ಗೊತ್ತಾಗಿರುತ್ತದೆ. ನಂತರ ಕಾನ್ಸ್ಟೇಬಲ್ ರವರು ಇನ್ಸಪೆಕ್ಟರ್ ಗೆ ದೂರವಾಣಿ ಮೂಲಕ ವಿಷಯ ತಿಳಿಸುವಾಗ ಅರುಣ್ ಕುಮಾರ್ ಪುತ್ತಿಲ ಕಾನ್ಸ್ಟೇಬಲ್ ರಲ್ಲಿ ಮೊಬೈಲ್ ಕೇಳಿ ಪಡೆದುಕೊಂಡು ಇನ್ಸ್ಪೆಕ್ಟರ್ ಜೊತೆ ಮಾತಡಿರುವುದಾಗಿದೆ. ಅದಕ್ಕೆ ಇನ್ಸ್ಪೆಕ್ಟರ್ ರವರು ಅನುಮತಿ ಕೊಟ್ಟಿರುತ್ತಾರೆ ಎಂದು ಕಂಡುಬಂದಿರುತ್ತದೆ.
  4. ನಂತರ ಪೊಲೀಸರ ಜೊತೆಗೆ ಸ್ಥಳೀಯರು ಹಾಗೂ ಅರುಣ್ ಕುಮಾರ್ ಪುತ್ತಿಲ ಜಾನುವಾರುಗಳನ್ನು ವಾಹನದಿಂದ ಇಳಿಸುವ ಕೆಲಸ ಮಾಡುತ್ತಿರುವುದಾಗಿದೆ.
    ಆದರೆ ಸಾಮಾಜಿಕ ಮಾಧ್ಯಮದಲ್ಲಿ ಈ ಘಟನೆಯು ಬೇರೆಯದೇ ರೀತಿಯಲ್ಲಿ ಪ್ರಚಾರಗೊಂಡಿರುತ್ತದೆ.
  5. ಜಾನುವಾರುಗಳ ಇನ್ನಷ್ಟು ಸಾವನ್ನು ತಪ್ಪಿಸುವ ಉದ್ದೇಶದಿಂದ ಪೊಲೀಸ್ ನಿರೀಕ್ಷಕರು ಅನುಮತಿ ಕೊಟ್ಟಿರುವುದು ಕಂಡುಬoದಿರುತ್ತದೆ. ಈ ಪ್ರಕರಣದಲ್ಲಿ, ಯಾವುದೇ ಧಾರ್ಮಿಕ ಸಂಘಟನೆ ಅಥವಾ ವ್ಯಕ್ತಿಯೊಂದಿಗೆ ಪೊಲೀಸರ ಯಾವುದೇ ಸಹಭಾಗಿತ್ವ ಅಥವಾ ದೂರುದ್ದೇಶ ಕಂಡುಬಂದಿಲ್ಲ. ಆದರೆ ದೂರವಾಣಿಯಲ್ಲಿ ಮಾತನಾಡುವಾಗ ಮುನ್ನೆಚ್ಚರಿಕೆ ತೆಗೆದುಕೊಳ್ಳದೆ ನಂತರ ಅಪರಾಧ ಸ್ಥಳವನ್ನು ರಾಜಕೀಯ ವೇದಿಕೆಯಾಗಿ ತಿರುಚುವ ಅವಕಾಶವಿರುವ ತಪ್ಪು ನಿರ್ಣಾಯ ತೆಗೆದುಕೊಂಡು ಇನ್ಸ್ಪೆಕ್ಟರ್ ತಪ್ಪಾಗಿರುತ್ತದೆ. ಆದ್ದರಿಂದ ಇನ್ಸ್ಪೆಕ್ಟರ್ಗೆ ಚಾರ್ಜ್ ಮೆಮೊ ನೀಡಲಾಗುತ್ತದೆ. ಮುಂದಿನ ದಿವಸಗಳಲ್ಲಿ ಅಪರಾಧ ಸ್ಥಳವನ್ನು ರಾಜಕೀಯ ವೇದಿಕೆಯಾಗಿ ಮಾಡಲು ಅವಕಾಶ ನೀಡದೆ ಮುನ್ನೆಚ್ಚರಿಕೆ ಕ್ರಮವನ್ನು ಕೈಗೊಳ್ಳಲಾಗುವುದು.
  6. ಘಟನೆಯನ್ನು ಎಲ್ಲರೂ ವಿಮರ್ಶೆ ಮಾಡಬಹುದು ಆದರೇ ಸತ್ಯವನ್ನು ತಿರುಚಿ ಸುಳ್ಳು ನಿರೂಪನೆಯನ್ನು ಸೃಷ್ಟಿಸಿ ಪ್ರಚಾರಕ್ಕೆ ಬಳಸಿಕೊಳ್ಳುವುದು ಕಂಡುಬoದಲ್ಲಿ ಅಂತವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದೆ.

Leave a Reply

Your email address will not be published. Required fields are marked *