Breaking
23 Mar 2026, Mon

ನೆಲಮಂಗಲದಲ್ಲಿ ರಸ್ತೆ ಗುಂಡಿಗೆ ಯುವತಿ ಬಲಿ

ಬೆಂಗಳೂರು: ರಸ್ತೆ ಗುಂಡಿಗೆ ಯುವತಿಯ ಜೀವವೊಂದು ಬಲಿಯಾದ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದ ಮಾದನಾಯಕನಹಳ್ಳಿ ಹತ್ತಿರದ ಹುಸ್ಕೂರು ಎಪಿಎಂಸಿ ರಸ್ತೆಯಲ್ಲಿ ನಡೆದಿದೆ.

ಯುವತಿ ಪ್ರಿಯಾಂಕಾ ( 26 ವರ್ಷ) ರಸ್ತೆ ಗುಂಡಿಗೆ ಬಲಿಯಾದ ಯುವತಿಯಾಗಿದ್ದಾಳೆ.

ಪ್ರಿಯಾಂಕಾ ಸಾಫ್ಟ್ವೇರ್ ಇಂಜಿನಿಯರ್ ಆಗಿದ್ದು, ಅಣ್ಣನೊಂದಿಗೆ ಬೈಕ್‌ನಲ್ಲಿ ಮಾದಾವರ ಕಡೆಗೆ ತೆರಳುತ್ತಿದ್ದರು. ಈ ವೇಳೆ ಗುಂಡಿಯಿಂದಾಗಿ ಬೈಕ್ ನಿಂದ ಬಿದ್ದು ಲಾರಿಯಡಿಗೆ ಸಿಲುಕಿ ಮೃತಪಟ್ಟಿದ್ದಾರೆ.

ಲೈಟ್ಸ್ ಮೆಕ್ಯಾನಿಕ್ ಕಂಪನಿ ಬಳಿ ಬೆಳಿಗ್ಗೆ 10.55 ರ ಸುಮಾರಿಗೆ ಆಕೆಯ ಸಹೋದರ ನರೇಶ್ ಮಾದಾವರ ಮೆಟ್ರೋ ನಿಲ್ದಾಣದಲ್ಲಿ ಆಕೆಯನ್ನು ಇಳಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ. ದಾಸನಪುರದ ಎಪಿಎಂಸಿ ಮಾರುಕಟ್ಟೆ ಕಡೆಗೆ ಹೋಗುತ್ತಿದ್ದ ಟ್ರಕ್ ಒಂದು ಗುಂಡಿಯನ್ನು ತಪ್ಪಿಸಲು ಪ್ರಯತ್ನಿಸುತ್ತಿದ್ದಾಗ ಬಲಕ್ಕೆ ತಿರುಗಿತು. ಟ್ರಕ್ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಬೈಕ್ ನ ಹ್ಯಾಂಡಲ್‌ಗೆ ತಗುಲಿದೆ.

ಈ ವೇಳೆ ಬೈಕ್ ಸವಾರ ಸಮತೋಲನ ಕಳೆದುಕೊಂಡು ಇಬ್ಬರೂ ರಸ್ತೆಗೆ ಬಿದ್ದಿದ್ದಾರೆ. ಬಲಕ್ಕೆ ಬಿದ್ದ ಪ್ರಿಯಾಂಕಾ ಮೇಲೆ ಟ್ರಕ್ ನ ಚಕ್ರ ಹರಿದು ಸ್ಥಳದಲ್ಲೇ ಸಾವನ್ನಪ್ಪಿದರೆ, ಸಹೋದರ ನರೇಶ್ ಗಾಯಗೊಂಡಿದ್ದಾರೆ.

ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *