ಮೂಡುಬಿದಿರೆ: ಯುವಕನೋರ್ವ ಮಹಿಳೆಯೊಬ್ಬರಿಗೆ ಕತ್ತಿಯಿಂದ ಇರಿದ ಘಟನೆ ಮೂಡುಬಿದಿರೆ ತಾಲೂಕಿನ ಪಾಲಡ್ಕ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವರ್ಣಬೆಟ್ಟುವಿನಲ್ಲಿ ಅ.25 ರಂದು ನಡೆದಿದೆ.

ಘಟನೆಯಲ್ಲಿ ಗಾಯಗೊಂಡವರನ್ನು ಕೆರೆಕೋಡಿ ನಿವಾಸಿ ನವೀನ್ ಅವರ ಪತ್ನಿ ಸಂಜೀವಿ (ನಯನಾ ನಾಯ್ಕ್) ಎಂದು ಗುರುತಿಸಲಾಗಿದೆ. ರಾಮ್ ಮೋಹನ ನಗರ ನಿವಾಸಿ ರಾಜೇಶ್ ನಾಯ್ಕ್ ಎಂಬಾತ ಕೃತ್ಯ ಎಸಗಿರುವ ಯುವಕನಾಗಿದ್ದು ಆತನನ್ನು ಬಂಧಿಸಲಾಗಿದೆ.

ಸದ್ಯ ಮಹಿಳೆಯ ತಲೆ, ಕೈ ಮತ್ತು ಕಾಲುಗಳಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಮಹಿಳೆಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.



