Breaking
10 May 2026, Sun

ಬಂಟ್ವಾಳದಲ್ಲಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಬಂಟ್ವಾಳ : ಮಹಿಳೆಯೊಬ್ಬರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕಿನ ಸರಪಾಡಿಯಲ್ಲಿ ಅ.25ರಂದು ಮಧ್ಯಾಹ್ನದ ವೇಳೆ ನಡೆದಿದೆ.

ಅಲ್ಲಿಪಾದೆ ನಿವಾಸಿ ಮೀನಾಕ್ಷಿ ಪೂಜಾರಿ (70) ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡು ದುರ್ದೈವಿಯಾಗಿದ್ದಾರೆ.

ಸರಪಾಡಿಯಲ್ಲಿ ಅಂಗಡಿಯೊಂದಕ್ಕೆ ಹೋಗಿದ್ದ ಮೀನಾಕ್ಷಿ ಬಳಿಕ ನೇರವಾಗಿ ನೇತ್ರಾವತಿ ನದಿ ಬದಿಗೆ ಬಂದಿದ್ದಾರೆ. ಸರಪಾಡಿಯಿಂದ ಬರಿಮಾರು ಕಡವಿನ ಬಾಗಿಲಿಗೆ ಜನಸಾಗಿಸುವ ದೋಣಿಯ ನಾವಿಕ ಅಲ್ಲೇ ಇದ್ದು, ಅವರನ್ನು ಕಡವಿನ ಬಾಗಿಲಿಗೆ ಬರುವವರಿದ್ದೀರಾ ಎಂದು ಕೇಳಿದ್ದಾರೆ.

ಆದರೆ ಈಕೆ ನಾನು ಬರುವುದಿಲ್ಲ ಎಂದು ಹೇಳಿ ಅಲ್ಲೇ ಉಳಿದುಕೊಂಡಿದ್ದಾರೆ. ಅದಾದ ಬಳಿಕ ನಾವಿಕ ದೋಣಿಯನ್ನು ಕಡವಿನ ಬಾಗಿಲಿಗೆ ಕೊಂಡುಹೋಗಿದ್ದು, ಕೆಲವೇ ಹೊತ್ತಿನಲ್ಲಿ ಇವರು ನದಿಗೆ ಹಾರಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *