Breaking
23 Mar 2026, Mon

ಕುಖ್ಯಾತ ಚಡ್ಡಿ ಗ್ಯಾಂಗ್ ನ ಇಬ್ಬರನ್ನು ಬಂಧಿಸಿದ ಚಿಕ್ಕಮಗಳೂರು ಪೊಲೀಸರು

ಚಿಕ್ಕಮಗಳೂರು: ಕುಖ್ಯಾತ ಚಡ್ಡಿ ಗ್ಯಾಂಗ್ ನ ಇಬ್ಬರನ್ನು ಬಂಧಿಸಿರುವ ಘಟನೆ ಅ.25 ಚಿಕ್ಕಮಗಳೂರಿನಲ್ಲಿ ನಡೆದಿದೆ.

ಬಂಧಿತರನ್ನು ಮಹಾರಾಷ್ಟ್ರ ಮೂಲದ ಪಪ್ಪು ಟಿಪ್ಪು ಪವಾರ್ ಹಾಗೂ ಮಂಗೇಶ್ ಅಂಕುಶ್ ಶಿಂಧೆ ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಕದ್ದಿದ್ದ 32 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಚಡ್ಡಿ ಗ್ಯಾಂಗಿನ 17 ಪ್ರಕರಣಗಳನ್ನು ಭೇದಿಸಿದ ಪೊಲೀಸರು 495 ಗ್ರಾಂ ಚಿನ್ನ, 1010 ಗ್ರಾಂ ಬೆಳ್ಳಿ, 75 ಸಾವಿರ ಹಣ ವಶಕ್ಕೆ ಪಡೆದುಕೊಂಡಿದ್ದಾರೆ.

ಮನೆಯಲ್ಲಿ ಯಾರೂ ಇಲ್ಲದ ವೇಳೆ ಚಡ್ಡಿ ಗ್ಯಾಂಗ್ ಕಳ್ಳತನ ಮಾಡುತ್ತಿದ್ದು, ಚಿಕ್ಕಮಗಳೂರು ಸೇರಿ ರಾಜ್ಯದ ವಿವಿಧ ಕಡೆ ಈ ಗ್ಯಾಂಗ್ ಕಳ್ಳತನ ಮಾಡಿದ್ದು, ಪ್ರಕರಣ ದಾಖಲಾಗಿದ್ದವು. ಎರಡೂವರೆ ತಿಂಗಳಲ್ಲಿ 400ಕ್ಕೂ ಹೆಚ್ಚು ಸಿಸಿಟಿವಿ ಫುಟೇಜ್ ಕಲೆಕ್ಟ್ ಮಾಡಿದ್ದ ಪೊಲೀಸರ ತಂಡ ಚಡ್ಡಿ ಗ್ಯಾಂಗ್ ನ ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಚಿಕ್ಕಮಗಳೂರು, ಚಿತ್ರದುರ್ಗ, ಬಳ್ಳಾರಿ ಹಾಗೂ ಗದಗ ಎಲ್ಲಾ ಕಡೆ 3 ಪ್ರಕರಣದ ಆರೋಪಿಗಳಿವರು.

ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *