Breaking
19 Sep 2026, Sat

ದ್ವೇಷ ಭಾಷಣ ಮಾಡಿದ ಆರೋಪ, ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್‌ಐಆರ್ ದಾಖಲು

ಪುತ್ತೂರು : ತಾಲೂಕಿನ ಉಪ್ಪಳಿಗೆಯಲ್ಲಿ ಆಯೋಜಿಸಿದ್ದ ದೀಪೋತ್ಸವ ಕಾರ್ಯಕ್ರಮದಲ್ಲಿ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕೋಮು ದ್ವೇಷದ ಭಾಷಣ ಮಾಡಿದ ಆರೋಪ ಮೇಲೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

ಈಶ್ವರಿ ಪದ್ಮುಂಜ ಎಂಬವರು ದೂರು ನೀಡಿದ್ದು ಉಪ್ಪಳಿಗೆಯಲ್ಲಿ ಆಯೋಜಿಸಿದ್ದ ದೀಪೋತ್ಸವ ಕಾರ್ಯಕ್ರಮದಲ್ಲಿ ಪ್ರಭಾಕರ್ ಭಟ್, ಧಾರ್ಮಿಕ ದ್ವೇಷ, ಮಹಿಳೆಯರ ಘನತೆಗೆ ಧಕ್ಕೆ ತರುವ ಭಾಷಣ ಮಾಡಿದ್ದಾರೆ.

ಆರ್ ಎಸ್ ಎಸ್ ಪ್ರತಿನಿಧಿಯಾದ ಪ್ರಭಾಕರ ಭಟ್ ಅವರು ಆಡಿರುವ ಮಾತುಗಳು ಖಾಸಗಿ ನ್ಯೂಸ್ ಯೂಟ್ಯೂಬ್ ಚಾನೆಲ್ ನಲ್ಲಿ ಪ್ರಸಾರವಾಗಿದೆ. ಈ ರೀತಿ ಇಲೆಕ್ಟ್ರಾನಿಕ್ ವಿಧಾನಗಳ ಮೂಲಕ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಈ ನಿಟ್ಟಿನಲ್ಲಿ ಅ.30ರಂದು ವಿಚಾರಣೆಗೆ ಹಾಜರಾಗಲು ಪೊಲೀಸರು ಪ್ರಭಾಕರ ಭಟ್ ಮನೆಗೆ ನೋಟಿಸ್ ಜಾರಿ ಮಾಡಿದ್ದಾರೆ.

Leave a Reply

Your email address will not be published. Required fields are marked *