Breaking
29 Jun 2026, Mon

ಚಾರ್ಮಾಡಿಯಲ್ಲಿ ಕಾರು ಪಲ್ಟಿ, ಮೂವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರು

ಉಜಿರೆ: ಕಾರೊಂದು ಪಲ್ಟಿಯಾಗಿ ಕಾರಿನಲ್ಲಿದ್ದ ಮೂವರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾದ ಘಟನೆ ಉಜಿರೆಯ ಚಾರ್ಮಾಡಿ ಘಾಟ್ ಸಮೀಪ ಅ.27 ಬೆಳಿಗ್ಗೆ ನಡೆದಿದೆ.

ಮೂಡಬಿದ್ರೆ ಯಿಂದ ಬೆಂಗಳೂರಿನತ್ತ ತೆರಳುತ್ತಿದ್ದ ಕಾರು ಚಾರ್ಮಾಡಿ ಘಾಟ್‌ನ ಅಣ್ಣಪ್ಪಸ್ವಾಮಿ ದೇವಸ್ಥಾನ ಸಮೀಪ ಇಳಿಜಾರಿನಲ್ಲಿ ಚಲಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ ಎಂದು ತಿಳಿದು ಬಂದಿದೆ.

ಈ ವೇಳೆ ಕಾರಿನಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಣಕಲ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *