ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಸುಳ್ಳು ಕೇಸ್ ದಾಖಲಿಸಿದ್ದಾರೆಂದು ಆರೋಪಿಸಿ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂಗೆ ಮನವಿ ನೀಡಲು ಆಗಮಿಸಿದ ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರನ್ನು ಇಂದು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅನಿಲ್, ಪ್ರಜ್ವಲ್ ಕೆ ವಿ ಸೇರಿದಂತೆ ಹಲವು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇದಾದ ಬೆನ್ನಲ್ಲೇ ಸ್ಥಳಕ್ಕೆ ಆಗಮಿಸಿದ ಸಾಮಾಜಿಕ ಹೋರಾಟಗಾರ್ತಿ ಪ್ರಸನ್ನ ರವಿ ಪೊಲೀಸರ ನಡೆಗೆ ಆಕ್ರೋಶ ವ್ಯಕ್ತಪಡಿಸಿದರು.




