ಬೆಳ್ತಂಗಡಿ: ತಾಲೂಕಿನ ಮಲವಂತಿಗೆಯ ದಿಡುಪೆ ಪರಿಸರದಲ್ಲಿ ಕಳೆದ ಒಂದು ವಾರದಿಂದ ಕಾಡಾನೆಗಳ ಹಿಂಡು, ಕೃಷಿ ತೋಟಗಳಿಗೆ ಲಗ್ಗೆ ಇಡುತ್ತಿದ್ದು ಅಪಾರ ಪ್ರಮಾಣದಲ್ಲಿ ಕೃಷಿ ಹಾನಿ ಉಂಟು ಮಾಡಿದ ಘಟನೆ ಅ.25 ರಂದು ನಡೆದಿದೆ.


ರಾತ್ರಿ ಈ ಪರಿಸರದ ಪನೋಡಿಬೈಲು ಎಂಬ ಪ್ರದೇಶಕ್ಕೆ ನುಗ್ಗಿದ ಕಾಡಾನೆಗಳು ಅಡಿಕೆ, ಬಾಳೆ ಸಹಿತ ಗದ್ದೆಗಳಿಗೆ ದಾಳಿ ಇಟ್ಟ ಕಾಡಾನೆಗಳ ಹಿಂಡು ಭಾರಿ ಪ್ರಮಾಣದಲ್ಲಿ ಕೃಷಿ ಬೆಳೆಗಳಿಗೆ ಹಾನಿ ಮಾಡಿವೆ.

ಈ ಕುರಿತು ಸ್ಥಳೀಯರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು ಕಳೆದ ಒಂದು ವಾರದಿಂದ ಕಾಡಾನೆಗಳ ಹಿಂಡು, ಕೃಷಿ ತೋಟಗಳಿಗೆ ಲಗ್ಗೆ ಇಡುತ್ತಿದ್ದು ಅಪಾರ ಪ್ರಮಾಣದಲ್ಲಿ ಕೃಷಿ ಹಾನಿ ಉಂಟು ಮಾಡುತ್ತಿವೆ ಎಂದು ಸ್ಥಳಿಯರು ತಿಳಿಸಿದ್ದಾರೆ.



