ಕೊಡಗು: ಕ್ರಿಕೆಟ್ ಆಡುತ್ತಿದ್ದ ವೇಳೆ ಯುವಕನೊಬ್ಬ ಹೃದಯಘಾತದಿಂದ ಸಾವನ್ನಪ್ಪಿದ ದಾರುಣ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಸುಂಟಿಕೊಪ್ಪ ಸಮೀಪದ ಕೆಂಚಟ್ಟಿಯಲ್ಲಿ ನಡೆದಿದೆ.

ಅರುಣ್ ಪೂಜಾರಿ (25) ಹೃದಯಘಾತದಿಂದ ಮೃತಪಟ್ಟ ಯುವಕನಾಗಿದ್ದಾನೆ.
ಬೆಂಗಳೂರಿನಲ್ಲಿ ಉದ್ಯೋಗದಲ್ಲಿರುವ ಅರುಣ್ ಪೂಜಾರಿ ರಜಾಕ್ಕೆ ಎಂದು ಮನೆಗೆ ಬಂದಿದ್ದ ಎನ್ನಲಾಗಿದ್ದು, ಸ್ನೇಹಿತರೊಂದಿಗೆ ಕ್ರಿಕೆಟ್ ಆಡುವ ವೇಳೆ ಸುಸ್ತಾಗಿ ಕುಸಿದು ಬಿದ್ದಿದ್ದಾನೆ, ತಕ್ಷಣವೇ ಆಸ್ಪತ್ರೆಗೆ ದಾಖಲು ಮಾಡಲಾಯಿತಾದರು ಪ್ರಯೋಜನವಾಗಿಲ್ಲ.




