Breaking
25 Sep 2026, Fri

ಉಡುಪಿಯಲ್ಲಿ ಕಾರೊಂದು ಢಿಕ್ಕಿ ಹೊಡೆದು ಸ್ಕೂಟರ್ ಸಹ ಸವಾರೆ ಸಾವು, ಸವಾರೆ ಗಂಭೀರ

ಉಡುಪಿ: ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸಹ ಸವಾರೆಯೊಬ್ಬರು ಮೃತಪಟ್ಟ ಘಟನೆ ಉಡುಪಿಯ ನಿಟ್ಟೂರು ಕೆಎಸ್‌ಆರ್‌ಟಿಸಿ ಡಿಪ್ಪೋ ಬಳಿ ಅ.26ರಂದು ರಾತ್ರಿ ವೇಳೆ ನಡೆದಿದೆ.

ಶಿರ್ವ ಪೊಲೀಸ್ ಠಾಣಾ ಎಎಸ್ಸೈ ಸುದೇಶ್ ಶೆಟ್ಟಿ ಅವರ ಮಗಳು ಸ್ಪರ್ಷ (24) ಎಂದು ಗುರುತಿಸಲಾಗಿದೆ. ಸವಾರೆ ಮೃತರ ತಾಯಿ ಶರ್ಮಿಳಾ (49) ಎಂಬವರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕರಾವಳಿ ಬೈಪಾಸ್ ಕಡೆಯಿಂದ ಸಂತೆಕಟ್ಟೆ ಕಡೆಗೆ ಸಾಗುತ್ತಿದ್ದ ಕಾರು ಎದುರಿನಿಂದ ಹೋಗುತ್ತಿದ್ದ ಸ್ಕೂಟರ್‌ಗೆ ಹಿಂದಿನಿಂದ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಇದರಿಂದ ಇಬ್ಬರು ಸವಾರರು ಸ್ಕೂಟರ್ ಸಮೇತ ರಸ್ತೆಗೆ ಬಿದ್ದಿದ್ದಾರೆ. ಈ ವೇಳೆ ತಕ್ಷಣ ಗಾಯಗೊಂಡ ಶರ್ಮಿಳಾ ಮತ್ತು ಸ್ಪರ್ಷ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆದ್ರೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಸ್ಪರ್ಷ ಅವರು ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *