Breaking
23 Mar 2026, Mon

ಅನಂತಪುರದ ಫ್ಯಾಕ್ಟರಿಯೊಂದರಲ್ಲಿ ಬಾಯ್ಲರ್ ಸ್ಫೋಟ, ಒಬ್ಬರು ಸಾವು ಹಲವರಿಗೆ ಗಾಯ

ಕಾಸರಗೋಡು: ಕಾರ್ಖಾನೆಯಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು, ಒಬ್ಬರು ಸಾವನ್ನಪ್ಪಿ, ಹಲವರು ಗಾಯಗೊಂಡ ಘಟನೆ ಕಾಸರಗೋಡುವಿನ ಅನಂತಪುರದ ಪ್ಲೈವುಡ್ ಕಾರ್ಖಾನೆಯೊಂದರಲ್ಲಿ ಅ.27 ರಂದು ನಡೆದಿದೆ.

ಸಂಜೆ ಸುಮಾರು 7ರಿಂದ 7.30ರೊಳಗೆ ಈ ದುರ್ಘಟನೆ ನಡೆದಿದ್ದು ಒಬ್ಬ ವಲಸೆ ಕಾರ್ಮಿಕ ಮೃತಪಟ್ಟಿದ್ದಾರೆ.

ಇಲ್ಲಿನ ಅನಂತಪುರ ಬಳಿಯ ಕಣ್ಣೂರು ಕುನ್ನಿಲ್ ಸಮೀಪದ ಡೆಕ್ಕೂರು ಪ್ಲೈವುಡ್ ಫ್ಯಾಕ್ಟರಿಯಲ್ಲಿನ ಬಾಯ್ಲರ್ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿದೆ. ಈ ವೇಳೆ ಕಾರ್ಖಾನೆಯಲ್ಲಿ 300 ರಷ್ಟು ಕಾರ್ಮಿಕರು ಸ್ಥಳದಲ್ಲಿದ್ದರು ಎಂದು ತಿಳಿದು ಬಂದಿದೆ.

ಸ್ಫೋಟದ ಪರಿಣಾಮ ಪೆರಾಲ್ ಕಣ್ಣೂರು, ಸಿದ್ದಿಬಯಲು ಸಮೀಪದವರೆಗೆ ಅಪಾಯ ಸಂಭವಿಸಿದ್ದು, ಅಗ್ನಿಶಾಮಕ ದಳ ಸಮೇತ ಹಲವರು ಪರಿಸ್ಥಿತಿ ನಿಯಂತ್ರಣದಲ್ಲಿ ತೊಡಗಿದ್ದಾರೆ. ಈ ಭಾಗಕ್ಕೆ ವಾಹನ ಸಂಚಾರ ನಿಷೇಧ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Leave a Reply

Your email address will not be published. Required fields are marked *