ಪುಣೆ: ಹಿಂದಿ ಹಾಗೂ ಮರಾಠಿ ಸಿನಿಮಾರಂಗದಲ್ಲಿ ಹೆಸರು ಗಳಿಸಿದ್ದ ನಟ ಸಚಿನ್ ಚಂದ್ವಾಡೆ (25) ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಅಕ್ಟೋಬರ್ 23, 2025 ರಂದು ಸಚಿನ್ ಚಂದ್ವಾಡೆ ಅವರು ಪುಣೆಯ ಪರೋಲಾದ ಫ್ಲಾಟ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಈ ವೇಳೆ ಕುಟುಂಬಸ್ಥರು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಪರಿಸ್ಥಿತಿ ಗಂಭೀರವಾದ ಹಿನ್ನೆಲೆ ಮತ್ತೊಂದು ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿತ್ತು.

ಎಲ್ಲಾ ಪ್ರಯತ್ನದ ಹೊರತಾಗಿಯೂ ಅವರು ಅಕ್ಟೋಬರ್ 24 ರಂದು ಚಿಕಿತ್ಸೆ ಫಲಿಸದೆ ಸಚಿನ್ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.




