ಸುಳ್ಯ : ಬೆಂಗಳೂರಿನಲ್ಲಿ ಸಹಾಯಕ ಸಬ್ ಇನ್ಸ್ ಪೆಕ್ಟರ್ ಆಗಿ ಕೆಲಸ ಮಾಡುತ್ತಿದ್ದ ಉದಯ್ ಹನಿಯಡ್ಕ ಅವರು ನಿಧನರಾಗಿದ್ದಾರೆ.
ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಕೈಪಡ್ಕದ ನಿವಾಸಿಯಾಗಿರುವ ಉದಯ್ ಅವರು ಕಳೆದ ಕೆಲವು ದಿನಗಳಿಂದ ತೀವ್ರ ಅನಾರೋಗ್ಯ ದಿಂದ ಬಳಲುತ್ತಿದ್ದರು. ಆದ್ರೆ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಹನಿಯಡ್ಕ ಕುಟುಂಬದ ದಿವಂಗತ ಆನಂದ ಗೌಡ ಹಾಗೂ ರುಕ್ಮಿಣಿ ದಂಪತಿಗಳ ಪ್ರಥಮ ಪುತ್ರರಾಗಿದ್ದಾರೆ.




