ಕೊಪ್ಪಳ: ಇಬ್ಬರು ಮಕ್ಕಳೊಂದಿಗೆ ತಾಯಿ ನೇಣಿಗೆ ಶರಣಾದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಬೆಣಕಲ್ ಗ್ರಾಮದಲ್ಲಿ ನಡೆದಿದೆ.

ಬೆಣಕಲ್ ಗ್ರಾಮದ ಲಕ್ಷ್ಮವ್ವ ಹನುಮಪ್ಪ ಭಜಂತ್ರಿ (30) ಮಕ್ಕಳಾದ ರಮೇಶ (4) ಹಾಗೂ ಜಾನ್ವಿ (2) ಮೃತ ದುರ್ದೈವಿಗಳಾಗಿದ್ದು ಶವಗಳು ಮನಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿವೆ. ಲಕ್ಷ್ಮವ್ವ ಗಂಡ ಹಾಗೂ ಅತ್ತೆ ಕೆಲಸಕ್ಕೆ ಹೋಗಿದ್ದ ವೇಳೆ ಮಹಿಳೆ ತನ್ನಿಬ್ಬರು ಮಕ್ಕಳಿಗೆ ಮೊದಲು ನೇಣು ಹಾಕಿ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಸಾವಿಗೆ ಕಾರಣ ತಿಳಿದು ಬಂದಿಲ್ಲ.

ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.




