Breaking
9 May 2026, Sat

ನಂತೂರಿನಲ್ಲಿ ಡಿವೈಡರ್‌ಗೆ ಗುದ್ದಿದ ಸಿಟಿ ಬಸ್, ಪ್ರಯಾಣಿಕರು ಪಾರು

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿದ ಸಿಟಿ ಬಸ್ ವೊಂದು ನಿಯಂತ್ರಣ ಕಳೆದುಕೊಂಡು ಡಿವೈಡರ್‌ಗೆ ಗುದ್ದಿದ ಘಟನೆ ಇಂದು ಬೆಳಗ್ಗೆ ಮಂಗಳೂರಿನ ನಂತೂರಿನಲ್ಲಿ ನಡೆದಿದೆ.

ವಾಮಂಜೂರು ಕಡೆಯಿಂದ ಬರುತ್ತಿದ್ದ ಸಾಯೀಷ ಹೆಸರಿನ 3 ನಂಬರಿನ ಸಿಟಿ ಬಸ್ ನಂತೂರು ಸಿಗ್ನಲ್ ದಾಟಿ ಮಲ್ಲಿಕಟ್ಟೆ ಕಡೆಗೆ ಬರುತ್ತಿತ್ತು. ಬಸ್ ಮುಂಭಾಗ ಸ್ಕೂಲ್ ಬಸ್ ಸಾಗುತ್ತಿದ್ದು, ಹಿಂಭಾಗ ಮತ್ತೊಂದು ಲೋಕಲ್ ಬಸ್ ಸಾಗುತ್ತಿತ್ತು ಎನ್ನಲಾಗಿದೆ.

ಈ ವೇಳೆ ಚಾಲಕನ ನಿಯಂತ್ರಣ ಕಳೆದುಕೊಂಡು ಬಸ್ ಡಿವೈಡರ್‌ಗೆ ಢಿಕ್ಕಿ ಹೊಡೆದಿದ್ದು, ಇದರಿಂದ ಬೀದಿ ದೀಪದ ಕಂಬವೊಂದು ಉರುಳಿ ಬಿದ್ದಿದ್ದು ಪ್ರಯಾಣಿಕರು ಬೆಚ್ಚಿಬಿದ್ದಿದ್ದಾರೆ. ಇತರ ವಾಹನ ಸವಾರರು ತನ್ನ ವಾಹನವನ್ನು ನಿಲ್ಲಿಸಿ ಬಸ್ ನಲ್ಲಿದ್ದ ಪ್ರಯಾಣಿಕರನ್ನು ಇಳಿಸಲು ಸಹಾಯ ಮಾಡಿದರು.

ಅಪಘಾತದ ಪರಿಣಾಮ ಬಸ್‌ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು ಅದೃಷ್ಟವಶಾತ್ ಯಾರಿಗೂ ಅಪಾಯ ಉಂಟಾಗಿಲ್ಲ.

ಘಟನಾ ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಧಾವಿಸಿದ್ದು, ಜೆಸಿಬಿ ಮೂಲಕ ಬಸ್ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು .

Leave a Reply

Your email address will not be published. Required fields are marked *