ವಿಟ್ಲ: ವಿಟ್ಲ ಬಸವನಗುಡಿ ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ 2024-25 ನೇ ಸಾಲಿನ ರಾಜ್ಯಮಟ್ಟದ ಬಾಲಕ ಬಾಲಕಿಯರ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳ ವೇಟ್ ಲಿಫ್ಟಿಂಗ್ ಸ್ಪರ್ಧೆಯು ಅಕ್ಟೋಬರ್ 25 ಮತ್ತು 26 ರಂದು ನಡೆಯಲಿದೆ. ಕಾರ್ಯಕ್ರಮವು ಶಾಲಾ ಶಿಕ್ಷಣ ಇಲಾಖೆ ಜಿಲ್ಲಾ ಉಪ ನಿರ್ದೇಶಕರ ಕಚೇರಿ(ಆಡಳಿತ) ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಾಗೂ ವಿಟ್ಟಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಸಹಯೋಗದಲ್ಲಿ ನಡೆಯಲಿದೆ.
ಅಕ್ಟೋಬರ್ 25ರಂದು ಅಪರಾಹ್ನ 2:00ಕ್ಕೆ ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಜೇಸಿ ಪೆವಿಲಿಯನ್ ನಲ್ಲಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ನಡೆಯಲಿದೆ. ಈ ಕಾರ್ಯಕ್ರಮವು ವಿಠಲ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಅಧ್ಯಕ್ಷರಾದ ಶ್ರೀಧರ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಬಂಟ್ವಾಳ, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು(ಆಡಳಿತ )ಉಪನಿರ್ದೇಶಕರ ಕಚೇರಿ, ಮಂಗಳೂರು, ರಾಜ್ಯಮಟ್ಟದ ವಿವಿಧ ದೈಹಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಉದ್ಯಮಿಗಳು ಮತ್ತು ಸಂಸ್ಥೆಯ ನಿರ್ದೇಶಕರುಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ರಾಜ್ಯದ ವಿವಿಧ ಜಿಲ್ಲೆಗಳಿಂದ ಆಯ್ಕೆಯಾದ 130ಕ್ಕಿಂತಲೂ ಅಧಿಕ ಪ್ರೌಢಶಾಲೆಯ ಬಾಲಕ ಬಾಲಕಿಯರು ಈ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದು, ಬಾಲಕರ ವಿಭಾಗವು 49ಕೆಜಿ, 55ಕೆಜಿ, 61 ಕೆಜಿ, 67 ಕೆಜಿ, 73 ಕೆಜಿ, 81ಕೆಜಿ, 89ಕೆ.ಜಿ,96 ಕೆಜಿ,102 ಕೆಜಿ,+102 ಕೆಜಿ ಹಾಗೂ ಬಾಲಕಿಯರ ವಿಭಾಗವು 40 ಕೆಜಿ, 45 ಕೆಜಿ,49 ಕೆಜಿ,55 ಕೆಜಿ,59 ಕೆಜಿ, 64 ಕೆಜಿ, 71 ಕೆಜಿ,76 ಕೆಜಿ 81 ಕೆಜಿ,+81 ಕೆಜಿ ಗಳ ಕ್ರೀಡಾಳುಗಳ ನಡುವೆ ನಡೆಯಲಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಪ್ರಥಮವಾಗಿ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ವೆಯಿಟ್ ಲಿಫ್ಟಿಂಗ್ ಸ್ಪರ್ಧೆಯ ಆಯೋಜನೆಯು ಇದಾಗಿದೆ. ಸಮಾರೋಪ ಸಮಾರಂಭವು ಅಕ್ಟೋಬರ್ 26ರಂದು ಸಂಜೆ ನಡೆಯಲಿದೆ ಎಂದು ಸಂಸ್ಥೆಯ ಅಧ್ಯಕ್ಷರಾದ ಶ್ರೀಧರ್ ಶೆಟ್ಟಿ ಡಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.