Breaking
23 Mar 2026, Mon

ಇಂದಬೆಟ್ಟು ಗ್ರಾಮದ ಬೆದ್ರಬೆಟ್ಟು ಚರ್ಚ್ ಬಳಿ ಗೋ ಮಾಂಸ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

ಬೆಳ್ತಂಗಡಿ : ದನವನ್ನು ಕಳವು ಮಾಡಿಕೊಂಡು ಬಂದು ಗೋಮಾಂಸ ಮಾಡುತ್ತಿದ್ದಾಗ ಪೊಲೀಸರು ದಾಳಿ ಮಾಡಿ ಇಬ್ಬರು ಆರೋಪಿಗಳನ್ನು ಬಂಧಿಸಿ, ದನದ ಮಾಂಸ ಮತ್ತು ಪರಿಕರಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ಅ.27 ರಂದು ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ಬೆದ್ರಬೆಟ್ಟು ಚರ್ಚ್ ಬಳಿ ನಡೆದಿದೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಗೋಮಾಂಸ ಮಾಡುತ್ತಿದ್ದ ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ಬೆದ್ರಬೆಟ್ಟು ನಿವಾಸಿ ಅಬ್ದುಲ್ ನಝೀರ್(36) ಮತ್ತು ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಝಕಾರಿಯಾ(36) ಎಂಬವರನ್ನು ಬಂಧಿಸಲಾಗಿದೆ.

ಇಲ್ಲಿನ ಖಾಸಗಿ ರಬ್ಬರ್ ತೋಟದ ಶೆಡ್ ಒಳಗಡೆ ಅಕ್ರಮವಾಗಿ ಜಾನುವಾರು ಕಡಿದು ಮಾಂಸ ಮಾಡುತ್ತಿದ್ದಾಗ ಬೆಳ್ತಂಗಡಿ ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರೆಗೆ ವೇಣೂರು ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಓಮನ ನೇತೃತ್ವದ ದಾಳಿ ಮಾಡಿದೆ.

ದಾಳಿಯ ವೇಳೆ ಆರೋಪಿಗಳಿಂದ 91 ಕೆ.ಜಿ ದನದ ಮಾಂಸ ಮತ್ತು ಪರಿಕರಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆಯಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸುಬ್ಬಪುರ್ ಮಠ್ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ಸಬ್ ಇನ್ಸ್ ಪೆಕ್ಟರ್ ಆನಂದ್. ಎಮ್ ಮತ್ತು ವೇಣೂರು ಸಬ್ ಇನ್ಸ್ಪೆಕ್ಟರ್ ಓಮನ ನೇತೃತ್ವದಲ್ಲಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *