ಕಾರವಾರ: ದಾಖಲೆ ಇಲ್ಲದೆ ಒಂದು ಕೋಟಿ ಹಣವನ್ನು ಖಾಸಗಿ ಬಸ್ ನಲ್ಲಿ ಸಾಗಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ-ಗೋವಾ ಗಡಿಯ ಮಾಜಾಳಿ ಚೆಕ್ ಪೋಸ್ಟ್ ಬಳಿ ನಡೆದಿದೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ ಕಲ್ಪೇಶ್ ಹಾಗೂ ಬಮರ ರಾಮ್ ಎಂಬವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಇವರಿಬ್ಬರು ಗೋವಾದಿಂದ ಬೆಂಗಳೂರಿನ ಹೊಸೂರಿಗೆ 1 ಕೋಟಿ ಹಣವನ್ನು ಸಾಗಾಟ ಮಾಡುತ್ತಿದ್ದು ಚೆಕ್‌ಪೋಸ್ಟ್ ಬಳಿ ಪೊಲೀಸರು ತಪಾಸಣೆ ನಡೆಸುವ ವೇಳೆ ಚೀಲದಲ್ಲಿ ಹಣ ಪತ್ತೆಯಾಗಿದೆ. ವಿಚಾರಣೆಯ ವೇಳೆ ಹಣವನ್ನು ಗೋವಾದ ಬೇರೆಯೊಬ್ಬರ ಹಣವನ್ನು ವ್ಯವಹಾರಕ್ಕಾಗಿ ಬೆಂಗಳೂರಿಗೆ ತೆಗೆದುಕೊಂಡು ಹೋಗುತ್ತಿರುವುದಾಗಿ ಹೇಳಿದ್ದಾನೆ. ಈ ಸಂಬಂಧ ದಾಖಲೆ ಕೇಳಿದಾಗ ನೀಡದ ಕಾರಣ ಇವರನ್ನು ವಶಕ್ಕೆ ಪಡೆದಿದ್ದಾರೆ.
ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.




