Breaking
10 May 2026, Sun

ಬಿಜೆಪಿ ಬಂಟ್ವಾಳ ಮಂಡಲ ಸಮಿತಿ ವತಿಯಿಂದ ನಡೆದ ಬಿಜೆಪಿ ಕಾರ್ಯಾಗಾರ ಕಾರ್ಯಕ್ರಮದಲ್ಲಿ ಕ್ಯಾಪ್ಟನ್ ಬ್ರಿಜೇಶ್ ಚೌಟಗೆ ಅಭಿನಂದನೆ

ಬಂಟ್ವಾಳ: ವಿಶ್ವ ಸಂಸ್ಥೆಯಲ್ಲಿ ನಮ್ಮ ದೇಶವನ್ನು ಪ್ರತಿನಿಧಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ಹಾಗೂ ಕರ್ನಾಟಕ ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಬಂಟ್ವಾಳದಲ್ಲಿ ಬಿಜೆಪಿ ಬಂಟ್ವಾಳ ಮಂಡಲ ಸಮಿತಿ ವತಿಯಿಂದ ನಡೆದ ಬಿಜೆಪಿ ಕಾರ್ಯಾಗಾರ ಕಾರ್ಯಕ್ರಮದಲ್ಲಿ ಅಭಿನಂದಿಸಲಾಯಿತು.

ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಕ್ಯಾಪ್ಟನ್ ಬ್ರಿಜೇಶ್ ಚೌಟ ಶಾಲು ಹೊದಿಸಿ ಅಭಿನಂದಿಸಿದರು.

ಈ ಸಂದರ್ಭ ಬಂಟ್ವಾಳ ಮಂಡಲ ಬಿಜೆಪಿ ಅಧ್ಯಕ್ಷರಾದ ಚೆನ್ನಪ್ಪ ಕೋಟ್ಯಾನ್, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ಪ್ರಮುಖರಾದ ಪೂಜಾ ಪೈ, ದೇವಪ್ಪ ಪೂಜಾರಿ, ದಿನೇಶ್, ದೇವದಾಸ್ ಶೆಟ್ಟಿ, ಜಯರಾಮ್ ರೈ, ಮಾಧವ ಮಾವೆ, ಸುದರ್ಶನ್ ಬಜ, ಶಿವಪ್ರಸಾದ್ ಶೆಟ್ಟಿ, ದಿನೇಶ್ ಅಮ್ಮ್ಟೂರು ಮತ್ತಿತರರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *